ಗಣರಾಜ್ಯೋತ್ಸವದ ಅತಿಥಿ ಹೊಲಾಂಡ್ ಗೆ ಪ್ರಧಾನಿ ಸ್ವಾಗತ
ಜನವರಿ 26 ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರನ್ನು ಭಾನುವಾರ ಪ್ರಧಾನಿ ಮೋದಿ ಚಂಡೀಘಡದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು...

ಚಂಡೀಘಡ: ಜನವರಿ 26 ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರನ್ನು ಭಾನುವಾರ ಪ್ರಧಾನಿ ಮೋದಿ ಚಂಡೀಘಡದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.
ಭಾನುವಾರ ಸಂಜೆ ಸುಮಾರು 4.15ರ ಹೊತ್ತಿಗೆ ಚಂಡೀಘಡದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಫ್ರಾನ್ಸ್ ನಿಯೋಗವನ್ನು ಪಂಜಾಬ್ ಮತ್ತು ಹರಿಯಾಣ ಗವರ್ನರ್ ಕಪ್ತಾನ್ ಸಿಂಗ್ ಸೋಲಂಕಿ ಅವರು ಮತ್ತು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸ್ವಾಗತಿಸಿದರು. ಈ ವೇಳೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು. ಬಳಿಕ ಚಂಢೀಘಡದ ಖ್ಯಾತ ರಾಕ್ ಗಾರ್ಡನ್ ಗೆ ಆಗಮಿಸಿದ ಹೊಲಾಂಡ್ ರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿ ಆಗಮಿಸಿರುವ ಹೊಲಾಂಡ್ ಅವರು ಇನ್ನೂ 3 ದಿನಗಳ ಕಾಲ ಭಾರತದಲ್ಲೇ ಉಳಿಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


