ದೇಶ

ಸಮ-ಬೆಸ ನಿಯಮದ ಭವಿಷ್ಯ ಜನ ನಿರ್ಧರಿಸಲಿದ್ದಾರೆ: ಕೇಜ್ರಿವಾಲ್

ಸಮ-ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮಕ್ಕೆ ಸಂಬಂಧಿಸಿದಂತೆ ನಗರದಾದ್ಯಂತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು 'ಜನ ಸಭಾ'ಗಳನ್ನು

ಸಮ-ಬೆಸ ನಿಯಮದ ಭವಿಷ್ಯ ಜನ ನಿರ್ಧರಿಸಲಿದ್ದಾರೆ: ಕೇಜ್ರಿವಾಲ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಸಮ-ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮಕ್ಕೆ ಸಂಬಂಧಿಸಿದಂತೆ ನಗರದಾದ್ಯಂತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು 'ಜನ ಸಭಾ'ಗಳನ್ನು ನಡೆಸಲಾಗುವುದು ಮತ್ತು ಅದನ್ನು ಮುಂದುವರೆಸುವ ಬಗ್ಗೆ ಅವರೇ ನಿರ್ಧರಿಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಆಮ್ ಆದ್ಮಿ ಪಕ್ಷದ ಶಾಸಕರು ಸಭೆ ನಡೆಸಲಿದ್ದು, ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ನೂತನ ಸಾರಿಗೆ ನಿಯಮದ ಭವಿಷ್ಯದ ಬಗ್ಗೆ ನಿರ್ಧರಿಸಲಾಗುವುದು ಎಂದರು. ಅಲ್ಲದೆ ಈ ಸಂಬಂಧ ಸಭೆ ನಡೆಸುವಂತೆ ಎಲ್ಲಾ ಶಾಸಕರಿಗೂ ಸೂಚಿಸಲಾಗುವುದು ಎಂದರು.
ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜನವರಿ 1ರಿಂದ 15ರವರೆಗೆ ರಾಷ್ಟ್ರರಾಜಧಾನಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.