ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಮೋದಿ ಸರ್ವಾಧಿಕಾರಿ ಪ್ರವೃತ್ತಿಗೆ ಸಾಕ್ಷಿ: ಕಾಂಗ್ರೆಸ್
ಕೇಂದ್ರ ಸರ್ಕಾರದ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನವದೆಹಲಿಕೇಂದ್ರ ಸರ್ಕಾರ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ನಿರ್ಧಾರ ಪ್ರಧಾನಿ c ಅವರ ಸರ್ವಾಧಿಕಾರಿ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಆರೋಪಿಸಿದೆ.
ಸೂಕ್ಷ್ಮ ರಾಜ್ಯವಾಗಿರುವ ಅರುಣಾಚಲ ಪ್ರದೇಶದ ವಿಷಯದಲ್ಲಿ ಕೇಂದ್ರ ಸರ್ಕಾರ ಲಘುವಾಗಿ ನಡೆದುಕೊಳ್ಳುತ್ತಿದೆ. ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿರುವುದು ಖಂಡನೀಯ ಹಾಗೂ ಅಸಾಂವಿಧಾನಿಕ ಕ್ರಮವಾಗಿದೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಆರೋಪಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಬಹುಮತವಿದೆ. ಪ್ರಧಾನಿ ನರೇಂದ್ರ ಮೋದಿ, ಅರುಣಾಚಲ ಪ್ರದೇಶದ ಬಿಜೆಪಿ ನಾಯಕರು ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಆದೇಶ ಮೋದಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ತಕ್ಷಣವೇ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಸಂದೀಪ್ ದೀಕ್ಷಿತ್ ಆಗ್ರಹಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


