ಆಂಧ್ರಪ್ರದೇಶದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಇಲ್ಲಿನ ನೋವಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶನಿವಾರ ತಡರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ...

Published On :
ವಿಜಯವಾಡ: ಇಲ್ಲಿನ ನೋವಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶನಿವಾರ ತಡರಾತ್ರಿ ಕಾಲೇಜು ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಶರಣಾಗಿರುವ 22ರ ಹರೆಯದ ಪುವ್ವಾಲ ಪ್ರೇಮ್ ಪ್ರಸಾದ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ಪಾನಿಕ್ಸ್ ವಿಭಾಗದಲ್ಲಿ ನಾಲ್ಕನೇ ವರ್ಷ ವಿದ್ಯಾರ್ಥಿಯಾಗಿದ್ದಾನೆ. ಈತ ಎರಡು ಮತ್ತು ಮೂರನೇ ವರ್ಷದ ಪರೀಕ್ಷೆಯಲ್ಲಿ ಹಲವಾರು ವಿಷಯಗಳಲ್ಲೇ ಅನುತ್ತೀರ್ಣನಾಗಿದ್ದು, ಅದನ್ನು ಪಾಸು ಮಾಡಲಾಗದ ವ್ಯಥೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಪ್ರಸಾದ್ ಸರಿಯಾರಿ ಕಾಲೇಜಿಗೆ ಬರುತ್ತಿರಲಿಲ್ಲ. ಮಾತ್ರವಲ್ಲದೆ ಆತ ಕಳೆದ ವರ್ಷ ಫೇಲಾಗಿದ್ದ ಪರೀಕ್ಷೆಗಳನ್ನು ಮತ್ತೆ ಬರೆದು ಪಾಸಾಗಿರಲಿಲ್ಲ ಎಂದು ನೋವಾ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಜೆ. ಶ್ರೀನಿವಾಸ ರಾವ್ ಹೇಳಿದ್ದಾರೆ.
ನಮಗೆ ಕಾಲೇಜಿನಲ್ಲಿ ಮತ್ತು ಕಾಲೇಜಿನ ಹಾಸ್ಟೆಲ್‌ನಲ್ಲಿ ಏನು ನಡೆಯಿತು ಎಂಬುದು ಗೊತ್ತಿರಲಿಲ್ಲ. ನಮಗೆ ಆಘಾತವಾಗಿದೆ. ಅವನು ತುಂಬಾ ಶ್ರಮಜೀವಿ ಮತ್ತು ಬದುಕಲ್ಲಿ ಸಾಧನೆ ಮಾಡಬೇಕೆಂಬ ಗುರಿ ಹೊಂದಿದ್ದನು. ಎರಡು ದಿನಗಳ ಹಿಂದೆಯಷ್ಟೇ ನನ್ನೊಂದಿಗೆ ಖುಷಿ ಖುಷಿಯಾಗಿ ಕಳೆದಿದ್ದ ಎಂದು ಪ್ರೇಮ್ ಪ್ರಸಾದ್‌ರ ಸಹೋದರ ಪವನ್ ಪ್ರಸಾದ್ ಹೇಳಿದ್ದಾರೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದರ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಸಿಕ್ಕಿಲ್ಲ. ಈತ ಡೆತ್‌ನೋಟ್ ಬರೆದಿಟ್ಟಿಲ್ಲ ಎಂದು ಬಲ್ಲಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆತ್ಮಹತ್ಯೆSuicideVijayawadaವಿಜಯವಾಡNova Engineering CollegePuvvala Prem Prasadನೋವಾ ಇಂಜಿನಿಯರಿಂಗ್ ಕಾಲೇಜ್ಪುವ್ವಾಲ ಪ್ರೇಮ್ ಪ್ರಸಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


