ಕೇರಳದಲ್ಲಿ 2 ರಷ್ಯಾ ಮಹಿಳೆಯರಿಗೆ ಆಟೋ ಚಾಲಕನಿಂದ ಕಿರುಕುಳ
ಇಬ್ಬರು ರಷ್ಯಾ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ...

ತಿರುವನಂತಪುರಂ: ಇಬ್ಬರು ರಷ್ಯಾ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಜನವರಿ 22 ರಂದು ಪ್ರವಾಸಕ್ಕೆಂದು ಕೇರಳಕ್ಕೆ ಬಂದಿದ್ದ ರಷ್ಯಾ ಪ್ರವಾಸಿಗರಾದ ಹಿರೇನ ಝೈಕಿನ ಮತ್ತು ನಟಲಿಯಾ ಅವರು ಕೇರಳ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ದೂರಿನನ್ವಯ ಆಟೋ ಚಾಲಕ ಜಲಾಲುದ್ದೀನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಟೋ ಚಾಲಕ ಜಲಾಲುದ್ದೀನ್ ತಮ್ಮ ಆಟೋದಲ್ಲಿ ಬರುವಂತೆ ಬಲವಂತ ಮಾಡಿದ ಈ ವೇಳೆ ತಾವು ನಿರಾಕರಿಸಿದ್ದರಿಂದ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಪ್ರವಾಸಿಗರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


