ಚುನಾಯಿತ ಸರ್ಕಾರ ಶೀಘ್ರವೇ ಮತ್ತೆ ಅಧಿಕಾರ ವಹಿಸಿಕೊಳ್ಳಲಿದೆ: ಜಮ್ಮು-ಕಾಶ್ಮೀರ ರಾಜ್ಯಪಾಲ
ಜಮ್ಮು-ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಶೀಘ್ರವೇ ಪುನಃ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಕಾಶ್ಮೀರ ರಾಜ್ಯಪಾಲ ಎನ್.ಎನ್ ವೋಹ್ರಾ ಹೇಳಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಶೀಘ್ರವೇ ಪುನಃ ಅಧಿಕಾರ ವಹಿಸಿಕೊಳ್ಳಲಿದೆ ಎಂದು ರಾಜ್ಯಪಾಲ ಎನ್.ಎನ್ ವೋಹ್ರಾ ಹೇಳಿದ್ದಾರೆ.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ರಾಜ್ಯಪಾಲ ವೋಹ್ರಾ, ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಅವರ ನಿಧನದಿಂದಾಗಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ. ಶೀಘ್ರವೇ ಚುನಾಯಿತ ಸರ್ಕಾರ ಮತ್ತೆ ಅಧಿಕಾರ ವಹಿಸಿಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿರೀಕ್ಷೆಯಂತೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ, ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಮೆಹಬೂಬಾ ಮುಫ್ತಿ, ತಂದೆಯ ನಿಧನದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


