ಪಠಾಣ್ಕೋಟ್ ರೇಲ್ವೆ ನಿಲ್ದಾಣದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ
ಪಠಾಣ್ಕೋಟ್ ರೇಲ್ವೆ ನಿಲ್ಲಾಣದಲ್ಲಿ ಕಾಣಿಸಿಕೊಂಡ ಅನುಮಾನಸ್ಪದ ಬ್ಯಾಗ್ ವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕ...

Published On :
ಪಠಾಣ್ಕೋಟ್: ಪಠಾಣ್ಕೋಟ್ ರೇಲ್ವೆ ನಿಲ್ಲಾಣದಲ್ಲಿ ಕಾಣಿಸಿಕೊಂಡ ಅನುಮಾನಾಸ್ಪದ ಬ್ಯಾಗ್ ವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿತ್ತು. ಆದರೆ ಇದೀಗ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಪಂಜಾಬ್ ಪೊಲೀಸರು, ರೇಲ್ವೆ ನಿಲ್ದಾಣದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೇಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಬ್ಯಾಗ್ ನಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಪಂಜಾಬ್ ಪೊಲೀಸ್ ಉಪ ಮಾಹಾ ನಿರ್ದೇಶಕ(ಗಡಿ ಭದ್ರತಾ ಪಡೆ) ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.
ಇತ್ತಿಚೀಗಷ್ಟೇ ಉಗ್ರರು ದಾಳಿ ನಡೆಸಿದ ವಾಯುನೆಲೆಗೆ ಸಮೀಪದಲ್ಲೇ ಇರುವ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿತ್ತು. ಇದರಿಂದ ಸಾರ್ವಜನಿಕರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪ್ರಸಂಗ ನಡೆಯಿತು.
ಬ್ಯಾಗ್ ಪತ್ತೆಯಾಗಿರುವ ಸ್ಥಳಕ್ಕೆ ಕ್ಷಣಾರ್ಧದಲ್ಲಿ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬ್ಯಾಗ್ ಪರಿಶೀಲಿಸಿದರು. ಅಲ್ಲದೇ ಬೇರೆಲ್ಲಾದರೂ ಬಾಂಬ್ ಇರಿಸಿರಬಹುದಾದ ಶಂಕೆ ಮೂಡಿದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದ ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


