ದೇಶ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಮಂಗಳವಾರದಿಂದ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ
ಪ್ರಣಬ್ ಮುಖರ್ಜಿ
Published On :
ನವದೆಹಲಿ: ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ಮಂಗಳವಾರದಿಂದ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಮಾಡಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ಸಹಿ ಹಾಕಿದ್ದು, ಇದರೊಂದಿಗೆ ರಾಷ್ಟ್ರಪತಿ ಆಡಳಿತ ಅಧಿಕೃತವಾಗಿ ಜಾರಿಗೆ ಬಂದಿದೆ.
ಕಾಂಗ್ರೆಸ್ ಆಡಳಿತವಿದ್ದ ಅರುಣಾಚಲದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂದು ಕೇಂದ್ರ ಸಚಿವ ಸಂಪುಟ ಕಳೆದ ಭಾನುವಾರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿತ್ತು. ಆದರೆ ಇದಕ್ಕೆ ತಕ್ಷಣ ಒಪ್ಪಗೆ ನೀಡದ ಪ್ರಣಬ್ ಮುಖರ್ಜಿ ಅವರು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸೂಚಿಸಿದ್ದರು.
ಇನ್ನು ರಾಷ್ಟ್ರಪತಿ ಆಡಳಿತಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ಕೇಂದ್ರ ಸಚಿವ ಸಂಪುಟದ ಶಿಫಾರಸನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.