ದೇಶ

ಉತ್ತರಾಖಂಡ್ ಗೆ ನುಸುಳಿರುವ 8 ಶಂಕಿತ ಉಗ್ರರು

8 ಶಂಕಿತ ಉಗ್ರರು ಉತ್ತರಾಖಂಡ್ ಗೆ ನುಸುಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ...

ಉತ್ತರಾಖಂಡ್ ಗೆ ನುಸುಳಿರುವ 8 ಶಂಕಿತ ಉಗ್ರರು
ಉತ್ತರಾಖಂಡ್ ಗೆ ನುಸುಳಿರುವ ಶಂಕಿತ ಉಗ್ರನ ಚಿತ್ರ...
Published On :
ಉತ್ತರಾಖಂಡ್: 8 ಶಂಕಿತ ಉಗ್ರರು ಉತ್ತರಾಖಂಡ್ ಗೆ ನುಸುಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಉತ್ತರಾಖಂಡ್ ಗೆ 8 ಮಂದಿಯನ್ನೊಳಗೊಂಡ ಉಗ್ರರ ತಂಡವೊಂದು ನುಸುಳಿದ್ದು, ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇವರಲ್ಲಿ ಒಬ್ಬ ಶಂಕಿತ ಉಗ್ರ ಡೆಹ್ರಾಡೂನ್ ನಲ್ಲಿ ಸೋಮವಾರ ರಾತ್ರಿ ಕಾಣಿಸಿಕೊಂಡಿದ್ದಾನೆ. ವಿಡಿಯೋ ಫೂಟೇಜ್ ಮೂಲಕ ಈ ವಿಷಯ ತಿಳಿದು ಬಂದಿದೆ ಎಂದು ಉತ್ತರಾಖಂಡ್ ನ ಪೊಲೀಸ್ ನಿರ್ದೇಶಕ ಬಿಎಸ್ ಸಿದು ಹೇಳಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಅವರು, ನಗರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಮೂಲಕ ಶಂಕಿತ ಉಗ್ರರು ನುಸುಳಿರುವ ಮಾಹಿತಿ ಲಭ್ಯವಾಗಿದೆ. ಆದರೆ, ಈ ವಿಡಿಯೋವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಶಂಕಿತ ಉಗ್ರರ ಛಾಯಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ, ನಗರಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಶಂಕಿತ ಉಗ್ರರ ಬಂಧನಕ್ಕಾಗಿ ತಂಡ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.