ಬಾಂಬ್ ಬೆದರಿಕೆ ಕರೆ: ಏರ್ ಇಂಡಿಯಾ, ಜೆಟ್ ಏರ್ವೇಸ್ ವಿಮಾನ ತುರ್ತು ಭೂಸ್ಪರ್ಶ
ವಿಮಾನ ಸ್ಫೋಟಿಸುವ ಬಾಂಬ್ ಬೆದರಿಕೆ ಕರೆ ಹಿನ್ನೆಲೆ ಏರ್ ಇಂಡಿಯಾ ಹಾಗೂ ಜೆಟ್ ಏರ್ವೇಸ್ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ...

ನವದೆಹಲಿ: ವಿಮಾನ ಸ್ಫೋಟಿಸುವ ಬಾಂಬ್ ಬೆದರಿಕೆ ಕರೆ ಹಿನ್ನೆಲೆ ಏರ್ ಇಂಡಿಯಾ ಹಾಗೂ ಜೆಟ್ ಏರ್ವೇಸ್ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಕಠ್ಮಂಡುವಿಗೆ ಹೊರಟ್ಟಿದ್ದ ವಿಮಾನ ಟೇಕ್ ಆಫ್ ಆದ ಕೆಲ ನಿಮಿಷಗಳಲ್ಲೇ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿವೆ. ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಐ-215 ಮತ್ತು ಜೆಟ್ ಏರ್ವೇಸ್ 9ಡಬ್ಲೂ 260ವನ್ನು ಸ್ಫೋಟಿಸುವುದಾಗಿ ಅನಾಮಿಕ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನ ಭೂಸ್ಪರ್ಶ ಮಾಡಿವೆ.
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು 121 ಪ್ರಯಾಣಿಕರು ಬುಕ್ ಮಾಡಿದ್ದು, ಜೆಟ್ ಏರ್ವೇಸ್ ವಿಮಾನ ಪ್ರಯಾಣಕ್ಕಾಗಿ 122 ಪ್ರಯಾಣಿಕರು ಬುಕ್ ಮಾಡಿದ್ದರು.
ವಿಮಾನ ಸ್ಫೋಟಿಸುವ ಬೆದರಿಕೆ ಕರೆ ಹಿನ್ನೆಲೆ ಭದ್ರತಾ ಅಧಿಕಾರಿಗಳು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ. ಈ ಎರಡು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


