ದೇಶ

ಫೇಸ್‌ಬುಕ್‌ ಗೆ ಗುಡ್ ಬೈ ಹೇಳಿದ ಮಾರ್ಕಂಡೇಯ ಕಟ್ಜು

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರು ನಿನ್ನೆ ರಾತ್ರಿ ಫೇಸ್‌ಬುಕ್‌ ಖಾತೆಗೆ ಗುಡ್ ಬೈ...

ಫೇಸ್‌ಬುಕ್‌ ಗೆ ಗುಡ್ ಬೈ ಹೇಳಿದ ಮಾರ್ಕಂಡೇಯ ಕಟ್ಜು
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು
Published On :
ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರು ನಿನ್ನೆ ರಾತ್ರಿ ಫೇಸ್‌ಬುಕ್‌ ಖಾತೆಗೆ ಗುಡ್ ಬೈ ಹೇಳಿದ್ದಾರೆ. 
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಇದು ತಮ್ಮ ಕೊನೆಯ ಫೇಸ್‌ಬುಕ್ ಪೋಸ್ಟ್ ಅಂತಾ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಹೇಳಿಕೊಂಡಿದ್ದಾರೆ. 
ಫೇಸ್ ಬುಕ್, ಟ್ವಿಟರ್ ಗಳಲ್ಲಿ ಹಲವು ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದೆ. ಈ ಮೂಲಕ ಜ್ಞಾನವನ್ನು ವಿಸ್ತರಿಸಬಹುದು ಎಂದುಕೊಂಡಿದ್ದೆ. ಆದರೆ, ಜ್ಞಾನವನ್ನು ಪಡೆಯುವುದಕ್ಕಿಂತ ಹೆಚ್ಚಾಗಿ, ನನ್ನ ಅಭಿಪ್ರಾಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಾ ಹೋಗುತ್ತಿದೆ. ಅಷ್ಟೇ ಅಲ್ಲದೇ, ನಿಂದನೆಯೂ ಜಾಸ್ತಿ ಆಗಿದೆ ಎಂದು ಕಟ್ಜು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. 
ನನ್ನಲ್ಲಿರುವ ಜ್ಞಾನವನ್ನು ಹಂಚಲು ಮುಂದಾದರೆ, ಅದನ್ನು ಅರ್ಥ ಮಾಡಿಕೊಳ್ಳದಾ ಕೆಲವರು ನಿಂದಿಸುತ್ತಿದ್ದಾರೆ. ಆದರೆ, ಇದರಿಂದ ನನಗೆ ಏನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಫೇಸ್‌ಬುಕ್‌ ಗೆ ಗುಡ್ ಬೈ ಹೇಳಿದ್ದಾರೆ. 
ಮಹಾತ್ಮಾ ಗಾಂಧಿ ಬ್ರಿಟಿಷ್ ಏಜೆಂಟ್ ಮತ್ತು ಸುಭಾಷ್‌ಚಂದ್ರ  ಬೋಸ್ ಜಪಾನ್ ಏಜೆಂಟ್ ಎಂದು ಹೇಳುವ ಮೂಲಕ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಟ್ಜು ಅವರು ವಿವಾದಕ್ಕೀಡಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.