ದೇಶ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಪ್ರಣಬ್ ಒಪ್ಪಿಗೆ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂಬ ಕೇಂದ್ರದ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮ್ಮತಿ ನೀಡಿದ್ದಾರೆ...

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಪ್ರಣಬ್ ಒಪ್ಪಿಗೆ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂಬ ಕೇಂದ್ರದ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಮ್ಮತಿ ನೀಡಿದ್ದಾರೆ.

ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆ ಎಂಬ ಕೇಂದ್ರದ ಅಭಿಪ್ರಾಯವನ್ನು ಪ್ರಣಬ್ ಒಪ್ಪಿಕೊಂಡಿದ್ದಾರೆ. ಸೋಮವಾರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು  ಕರೆಯಿಸಿಕೊಂಡಿದ್ದ ಮುಖರ್ಜಿ ಸಂಪುಟ ನಿರ್ಧಾರದ ಬಗ್ಗೆ ಪ್ರಶ್ನಿಸಿದ್ದರು. ರಾಜಕೀಯ ಅಸ್ಥಿರತೆ ಎದುರಿಸುತ್ತಿದ್ದ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಭಾನುವಾರ ಕೇಂದ್ರ ಸಂಪುಟಸಭೆ ತೀರ್ಮಾನ ಕೈಗೊಂಡು, ರಾಷ್ಟ್ರಪತಿಗಳಿಗೆ ಆ ಸಂಬಂಧ ಶಿಫಾರಸ್ಸು ಕಳಿಸಿಕೊಟ್ಟಿತ್ತು.

ಆ ರಾಜ್ಯದಲ್ಲಿ ಆರು ತಿಂಗಳಿಗೂ ಹೆಚ್ಚು ಕಾಲ ವಿಧಾನಸಭಾ ಅಧಿವೇಶನ ನಡೆಯದ ಹಿನ್ನಲೆಯಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಲ್ಬಣಿಸಿದೆ. ಹಾಗಾಗಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಡಳಿತ ಜಾರಿಯ ಒತ್ತಡಕ್ಕೆ ಸಿಲುಕಿತ್ತು ಎಂದು ಕೇಂದ್ರ ಗೃಹ ಇಲಾಖೆ ಸಹಯಾಕ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.