ವೈದ್ಯರ ಮೇಲೆ ಹಲ್ಲೆ ಮಾಡಿದ ಶಾಸಕನ ಪುತ್ರ
ವೈದ್ಯರ ಮೇಲೆ ಶಾಸಕನ ಪುತ್ರನೊಬ್ಬ ಹಲ್ಲೆ ಮಾಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ...

Published On :
ಪಾಟ್ನಾ: ವೈದ್ಯರ ಮೇಲೆ ಶಾಸಕನ ಪುತ್ರನೊಬ್ಬ ಹಲ್ಲೆ ಮಾಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಬಿಹಾರದ ಶಾಸಕನ ಪುತ್ರನಾದ ರಂಜಿತ್ ಎಂಬುವವನ್ನು ನನ್ನ ಮೇಲೆ ವೀಲ್ ಚೇರ್ ನಲ್ಲಿ ಹಲ್ಲೆ ಮಾಡಿದ್ದು, ನನ್ನನ್ನು ಕೊಲ್ಲಲೆಂದೇ ಬಂದಿರುವಂತೆ ಕಾಣುತ್ತದೆ ಎಂದು ವೈದ್ಯ ಡಾ.ಸತ್ಯೇಂದ್ರ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.
ಶಾಸಕನ ಪುತ್ರ ರಂಜಿತ್ ವಿರೋಧಿ ರಾಜಕಾರಣಿಯೊಬ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು. ಈತ ತನ್ನ ಎಂಟು ಸಹಚರರೊಂದಿಗೆ ಆಸ್ಪತ್ರೆಗೆ ಆಗಮಿಸಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾನೆ. ವೈದ್ಯರ ಹೇಳಿಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


