100ಕ್ಕೂ ಹೆಚ್ಚು ಬಾರಿ ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ಸೆ ಹೊಣೆ: ರಿಜಿಜು
ಅರುಣಾಚಲ ಪ್ರದೇಶದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ಬೆನ್ನಲ್ಲೇ, ದೇಶದ ಹಲವು...

Published On :
ನವದೆಹಲಿ: ಅರುಣಾಚಲ ಪ್ರದೇಶದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದ ಬೆನ್ನಲ್ಲೇ, ದೇಶದ ಹಲವು ರಾಜ್ಯಗಳಲ್ಲಿ ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಬಾರಿ ರಾಷ್ಟ್ರಪತಿ ಆಡಳಿತ ಹೇರಿರುವುದಕ್ಕೆ ಕಾಂಗ್ರೆಸ್ಸೆ ಹೊಣೆ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.
ವಿಶೇಷ ಪ್ರಕರಣಗಳಲ್ಲಿ ಮಾತ್ರ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗುತ್ತದೆ. ಆದರೆ ಕಾಂಗ್ರೆಸ್ ಅರುಣಾಚಲ ಸೇರಿದಂತೆ ಅಸ್ಥಿರತೆ ಹಿನ್ನೆಲೆಯಲ್ಲೇ ಹಲವು ರಾಜ್ಯಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಬಾರಿ ರಾಷ್ಟ್ರಪತಿ ಆಡಳಿತ ಹೇರಿದೆ ಎಂದು ರಿಜಿಜು ಅವರು ತಮ್ಮ ಫೇಸ್ಬುಕ್ನಲ್ಲಿ ಪೊಸ್ಟ್ ಮಾಡಿದ್ದಾರೆ.
ಒಗ್ಗಟ್ಟು ಪ್ರದರ್ಶಿಸುವಲ್ಲಿ ಹಾಗೂ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವಲ್ಲಿ ವಿಫಲವಾಗಿದ್ದಕ್ಕೆ ಕಾಂಗ್ರೆಸ್ ಅರುಣಾಚಲ ಪ್ರದೇಶ ಜನತೆಯ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಶಾಸಕರು ಇತರರ ಪ್ರಭಾವಕ್ಕೆ ಒಳಗಾಗಲು ಅವರೇನು ಚಿಕ್ಕಮಕ್ಕಳಲ್ಲ. ಕೇಂದ್ರ ಸರ್ಕಾರಕ್ಕೆ ಆತುರವಿದ್ದರೆ ಕಾಂಗ್ರೆಸ್ ನಾಯಕರು ವಿಧಾಸಭೆ ಅಥವಾ ರಾಜಭವನ ಸೀಲ್ ಮಾಡಿದಾಗಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುತ್ತಿದ್ದೇವು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


