ದೇಶ

ವಿವಿಧ ಪಕ್ಷಗಳ ಜತೆಗೂಡಿ 5 ರಾಜ್ಯಗಳ ಚುನಾವಣೆಗೆ ಸ್ಪರ್ಧೆ

ವಿವಿಧ ಪಕ್ಷ, ಸಂಘಟನೆಗಳ ಸಂಯೋಜನೆಯೊಂದಿಗೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ ಎಂದು ಸಿಪಿಐ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ ತಿಳಿಸಿದ್ದಾರೆ.

ವಿವಿಧ ಪಕ್ಷಗಳ ಜತೆಗೂಡಿ 5 ರಾಜ್ಯಗಳ ಚುನಾವಣೆಗೆ ಸ್ಪರ್ಧೆ
Published On :

ಮಂಗಳೂರು: ವಿವಿಧ ಪಕ್ಷ, ಸಂಘಟನೆಗಳ ಸಂಯೋಜನೆಯೊಂದಿಗೆ ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ ಎಂದು ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಾಗಳ್ಳಿ ಶೀಘ್ರದಲ್ಲೇ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಿಪಿಎಂ, ಎಂಡಿಎಂಕೆ ಮತ್ತು ದಲಿತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿಪಿಐ ಯೋಜನೆ ರೂಪಿಸಿದೆ.
ಮುಖ್ಯವಾಗಿ ತಮಿಳುನಾಡಿನಲ್ಲಿ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು ಎಂದು ಹೇಳಿದರು.
ಭೂಮಿ ಕಸಿಯುವ ಬ್ರಿಟೀಷ್ ಪದ್ಧತಿ: ರೈತರ ಭೂಮಿಯನ್ನು ಅವರ ಇಚ್ಛೆಗೆ ವಿರುದ್ಧವಾಗಿ ಕಸಿದುಕೊಂಡು ಕಾರ್ಪೋಟ್ರೇಟ್ ಸಂಸ್ಥೆಗಳಿಗೆ ನೀಡುವ ಅತಿ ಕ್ರೂರ, ಬ್ರಿಟಿಷ್ ಪದ್ಧತಿ ಇರುವುದು ನಮ್ಮ ದೇಶದಲ್ಲಿ ಮಾತ್ರ. ಬೇರೆ ದೇಶಗಳಲ್ಲಿ ಸರ್ಕಾರಿ ಜಾಗಗಳನ್ನು ಮಾತ್ರವೇ ಕೈಗಾರಿಕೆಗಳಿಗೆ ಬಳಕೆ ಮಾಡಲಾಗುತ್ತದೆ. ದೇಶದಲ್ಲಿ ವಿದೇಶಿ ಬಂಡವಾಳಗಾರರ ಪರವಾಗಿ ನಿಂತಿರುವ ನರೇಂದ್ರ ಮೋದಿ ಸರ್ಕಾರವು ರೈತರ ಜಮೀನುಗಳಿಗೆ ಕೈಹಾಕುವುದನ್ನು ತಕ್ಷಣ ನಿಲ್ಲಿಸಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.