ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಗೆ ಕಾರಣವಾಯ್ತಾ ಗೋಹತ್ಯೆ?
ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕಾರಣಕ್ಕಾಗಿಯೇ ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು...

ನವದೆಹಲಿ: ರಾಜ್ಯದಲ್ಲಿ ಗೋ ಹತ್ಯೆ ಹೆಚ್ಚುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಕಾರಣಕ್ಕಾಗಿಯೇ ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ರಾಜ್ಯಪಾಲ ಜ್ಯೋತಿಪ್ರಸಾದ್ ರಾಜಕೋವಾ ಅವರು ಹೇಳಿರುವುದಾಗಿ ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.
ಅರುಣಾಚಲದಲ್ಲಿ ಸಂವಿಧಾನ ಕಾರ್ಯಚಟುವಟಿಕೆಯೇ ಕುಸಿಯುತ್ತಿದೆ ಎಂದು ಉಲ್ಲೇಖಿಸಿರುವ ರಾಜ್ಯಪಾಲ ಜೆಪಿ ರಾಜಕೋವಾ, ಶಿಫಾರಸು ಪತ್ರದ ಜೊತೆ ಗೋಹತ್ಯೆ ಫೋಟೋಗ್ರಾಫ್ಸ್ ಅನ್ನು ಲಗತ್ತಿಸುವ ಮೂಲಕ ರಾಜ್ಯದಲ್ಲಿ ತುರ್ತಾಗಿ ರಾಷ್ಟ್ರಪತಿ ಆಡಳಿತ ಹೇರುವುದನ್ನು ಸಮರ್ಥಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
ಅರುಣಾಚಲಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವ ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಕಾರಣ ಬಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


