ದೇಶ

ಸ್ಮೃತಿ ಇರಾನಿ, ದತ್ತಾತ್ರೇಯ ವಜಾಕ್ಕೆ ಸಿಪಿಐ(ಎಂ) ಆಗ್ರಹ

ರೋಹಿತ್ ವೇಮುಲ ಆತ್ಮಹತ್ಯೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಬಂಡಾರು ದತ್ತಾತ್ರೇಯ ಕಾರಣ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಇಬ್ಬರನ್ನೂ ಸಚಿವ ಸ್ಥಾನದಿಂದ ವಜಾಗೊಳಿಸಬೇಕು...

ಸ್ಮೃತಿ ಇರಾನಿ, ದತ್ತಾತ್ರೇಯ ವಜಾಕ್ಕೆ ಸಿಪಿಐ(ಎಂ) ಆಗ್ರಹ
ಸಿಪಿಐ-ಎಂ
Published On :

ನವದೆಹಲಿ: ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ  ಹಾಗೂ ಬಂಡಾರು ದತ್ತಾತ್ರೇಯ ಕಾರಣ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಇಬ್ಬರನ್ನೂ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಿಪಿಐ-ಎಂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.
ಸಿಪಿಐಎಂ ಜರ್ನಲ್ ಪೀಪಲ್ಸ್ ಡೆಮಾಕ್ರಸಿಯಲ್ಲಿ ರೋಹಿತ್ ವೇಮುಲ ಅವರ ಬಗ್ಗೆ ಬರೆಯಲಾಗಿದ್ದು, ಹೈದರಾಬಾದ್ ನ ಉಪಕುಲಪತಿ ಪಿ.ಅಪ್ಪ ರಾವ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ಬಂಡಾರು ದತ್ತಾತ್ರೇಯ, ಸ್ಮೃತಿ ಇರಾನಿ ಅವರೊಂದಿಗೆ ಉಪಕುಲಪತಿ ಪಿ.ಅಪ್ಪ ರಾವ್ ಅವರನ್ನೂ ವಜಾಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಬಳಿಕವೂ ಇಬ್ಬರು ಕೇಂದ್ರ ಸಚಿವರನ್ನು ಸ್ಥಾನದಲ್ಲಿ ಮುಂದುವರೆಸುವುದನ್ನು ಒಪ್ಪಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ಇಬ್ಬರೂ ಸಚಿವರನ್ನು ವಜಾಗೊಳಿಸಬೇಕು ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.