ಮದ್ಯ ನಿಷೇಧ ವಿರೋಧಿಸಿ ಬಿಹಾರ ಸಿಎಂ ಮೇಲೆ ಶೂ ಎಸೆದ ವ್ಯಕ್ತಿ
ಅಪರಿಚಿತ ವ್ಯಕ್ತಿಯೊಬ್ಬ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರ ಮೇಲೆ ಶೂ ಎಸೆದ ಘಟನೆ ಗುರುವಾರ ನಡೆದಿದೆ

Published On :
ಪಾಟ್ನಾ: ಅಪರಿಚಿತ ವ್ಯಕ್ತಿಯೊಬ್ಬ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರ ಮೇಲೆ ಶೂ ಎಸೆದ ಘಟನೆ ಗುರುವಾರ ನಡೆದಿದೆ. ಅದೃಷ್ಟವಶಾತ್ ಶೂ ಸಿಎಂ ಮೇಲೆ ಬಿಳದೇ ಪಕ್ಕಕ್ಕೆ ಬಿದ್ದಿದೆ.
ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಮದ್ಯ ನಿಷೇಧ ವಿರೋಧಿಸಿ ವ್ಯಕ್ತಿಯೊಬ್ಬರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಿತಿಶ್ ಕುಮಾರ್ ಅವರ ಮೇಲೆ ಶೂ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಟ್ನಾದ ಬಕ್ತಿಯಾರ್‌ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮೇಲೆ ಶೂ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


