ಇಬ್ಬರು ಮೇಜರ್ ಜನರಲ್ ಗಳ ವಿರುದ್ಧ ಭ್ರಷ್ಟಾಚಾರದ ಆರೋಪ: ಸಿಬಿಐ ತನಿಖೆಗೆ ರಕ್ಷಣಾ ಸಚಿವಾಲಯದ ಆದೇಶ
ಮೇಜರ್ ಜನರಲ್ ಶ್ರೇಣಿಯ ಇಬ್ಬರು ಸೇನಾ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ರಕ್ಷಣಾ ಸಚಿವಾಲಯ ಆಗ್ರಹಿಸಿದೆ.

ನವದೆಹಲಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿರುವ ಕಾರಣ ಮೇಜರ್ ಜನರಲ್ ಶ್ರೇಣಿಯ ಇಬ್ಬರು ಸೇನಾ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ರಕ್ಷಣಾ ಸಚಿವಾಲಯ ಆಗ್ರಹಿಸಿದೆ.
ಅಪ್ರಾಮಾಣಿಕತೆ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ಕೆಲವು ಅಧಿಕಾರಿಗಳಿಗೆ ರಕ್ಷಣಾ ಇಲಾಖೆ ಬಡ್ತಿಯನ್ನು ನಿರಾಕರಿಸಿತ್ತು. ಮೇಜರ್ ಜನರಲ್ ಶ್ರೇಣಿಯ ಇಬ್ಬರು ಸೇನಾ ಅಧಿಕಾರಿಗಳ ಅಪ್ರಾಮಾಣಿಕತೆ ಬಗ್ಗೆ ಕೇಳಿಬಂದಿರುವ ಆರೋಪಗಳನ್ನು ಸಿಬಿಐ ಗೆ ಕಳಿಸಲಾಗಿದ್ದು, ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ ರಕ್ಷಣಾ ಇಲಾಖೆಗೆ ಸಿಬಿಐ ಪ್ರತಿಕ್ರಿಯೆ ನೀಡಲಿದೆ.
ಮೂರು ಲೆಫ್ಟಿನೆಂಟ್ ಜನರಲ್ ಹುದ್ದೆಗಳು ಖಾಲಿಯಿದ್ದ ಹಿನ್ನೆಲೆಯಲ್ಲಿ ನೇಮಕಾತಿ ಮಾಡಲು ಸೇನೆಯ ವಿಶೇಷ ಉತ್ತೇಜನಾ ಮಂಡಳಿ ಸಭೆ ಸೇರಿತ್ತು. ಸಭೆಯಲ್ಲಿ 33 ಅಧಿಕಾರಿಗಳನ್ನು ಲೆಫ್ಟಿನೆಂತ್ ಜನರಲ್ ಹುದ್ದೆಗೆ ಪರಿಗಣಿಸಲಾಗಿತ್ತು. ಈ ಪೈಕಿ ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿದ್ದು ಈ ವಿಷಯದ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರೇ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


