ರೋಹಿತ್ ವೇಮುಲ ಆತ್ಮಹತ್ಯೆ ಮೋದಿ ವಿರೋಧಿ ಪ್ರಚಾರಕ್ಕಾಗಿ ಬಳಕೆ: ವೆಂಕಯ್ಯ ನಾಯ್ಡು

ನವದೆಹಲಿ: ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದಾರೆ.
ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನಿಟ್ಟುಕೊಂಡು ಮೊಸಳೆ ಕಣ್ಣೀರು ಸುರಿಸುತ್ತಿರುವುದನ್ನು ಕಾಂಗ್ರೆಸ್ ಬಿಡಬೇಕು, ರೋಹಿತ್ ವೇಮುಲಾ ಆತ್ಮಹತ್ಯೆಗೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ಯುಪಿಎ ಸರ್ಕಾರದ ಅವಧಿಯಲ್ಲಿ 9 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿದ್ದರು ಎಂದು ವೆಂಕಯ್ಯ ನಾಯ್ಡು ಪ್ರಶ್ನಿಸಿದ್ದಾರೆ.
ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್ ಪಕ್ಷಗಳು ಮೋದಿ ವಿರೋಧಿ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


