ದೆಹಲಿ ಶಾಲೆಯಲ್ಲಿ ಮಗು ಸಾವು: ತನಿಖೆಗೊಳಪಡುವಂತೆ ಶಿಕ್ಷಕರಿಗೆ ಸೂಚನೆ
ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ...

ನವದೆಹಲಿ: ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ.
ದೆಹಲಿಯ ರ್ಯಾನ್ ಅಂತರಾಷ್ಟ್ರೀಯ ಶಾಲೆಯೊಂದರ ನೀರಿನ ಟ್ಯಾಂಕ್ ಒಂದರಲ್ಲಿ ನಿನ್ನೆ 6 ವರ್ಷ ಮಗುವಿನ ಮೃತ ದೇಹ ದೊರಕಿತ್ತು. ಘಟನೆ ವಿರೋಧಿ ಹಲವು ಪ್ರತಿಭಟನೆ ನಡೆದಿದ್ದವು. ಅಲ್ಲದೆ, ಶಾಲೆಯ ಪರವಾನಗಿಯನ್ನು ರದ್ದು ಮಾಡುವಂತೆ ಆಗ್ರಹಗಳು ಕೇಳಿಬಂದಿದ್ದವು.
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯಲ್ಲಿರುವ ಸಿಸಿಟಿವಿಯನ್ನು ಪರಿಶೀಲನೆಗೊಳಪಡಿಸಿದ್ದರು. ಈ ವೇಳೆ ದೃಶ್ಯಾವಳಿಯಲ್ಲಿ ಕೆಲವು ಲೋಪದೋಷಗಳಿರುವುದನ್ನು ಗಮನಿಸಿದ್ದರು. ಹೀಗಾಗಿ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಇದೀಗ ಶಾಲೆಯ ಪ್ರಾಂಶುಪಾಲರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿದ್ದು, ತನಿಖೆಗೊಳಪಡುವಂತೆ ಶಾಲೆಯ ಎಲ್ಲಾ ಶಿಕ್ಷಕರಿಗೂ ಸೂಚನೆ ನೀಡಿದ್ದಾರೆ.
ಪ್ರಸ್ತುತ ಪ್ರಕರಣ ಸಂಬಂಧ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆಕ್ಷನ್ 304(ಎ)ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರೇಮ್ ನಾಥ್ ಅವರು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಯಾವುದೇ ರೀತಿಯ ಕಾನೂನು ಕ್ರಮಕೈಗೊಳ್ಳಲು ನಾವು ಸಿದ್ಧರಿದ್ದೇವೆ. ಪ್ರಸ್ತುತ ಬಾಲಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


