ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೆಮುಲ ದಲಿತನಲ್ಲ: ಸುಷ್ಮಾ ಸ್ವರಾಜ್
ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ದಲಿತನೇ ಆಗಿರಲಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾನುವಾರ ಹೇಳಿದ್ದಾರೆ...

ಹೈದರಾಬಾದ್: ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ದಲಿತನೇ ಆಗಿರಲಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾನುವಾರ ಹೇಳಿದ್ದಾರೆ.
ದಲಿತ ವಿದ್ಯಾರ್ಥಿ ಸಾವು ಕುರಿತಂತೆ ಮಹಾರಾಷ್ಟ್ರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಸಂಬಂಧ ನನಗೆ ಗೊತ್ತಿರುವ ಹಾಗೂ ಬಂದಿರುವ ಮಾಹಿತಿಯ ಪ್ರಕಾರ ರೋಹಿಲ್ ದಲಿತ ಸಮುದಾಯಕ್ಕೆ ಸೇರಿದವನಲ್ಲ. ಅವನು ದಲಿತ ಸಮುದಾಯಕ್ಕೆ ಸೇರಿದವನೆಂದು ಹೇಳಲಾಗುತ್ತಿದೆಯಷ್ಟೇ. ಕೆಲವು ವ್ಯಕ್ತಿಗಳು ಪ್ರಕರಣವನ್ನು ಸುಖಾಸುಮ್ಮನೆ ಸಮುದಾಯ ಗಲಭೆಯಾಗಿ ಮಾರ್ಪಾಡು ಮಾಡುವ ಯತ್ನ ನಡೆಸುತ್ತಿದ್ದಾರೆ. ಘಟನೆಯನ್ನು ಜಾತಿ ಗಲಭೆಯಾಗಿ ಮಾರ್ಪಾಡು ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ನಡೆದ ಘರ್ಷಣೆಯೊಂದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ರೋಹಿತ್ ಸೇರಿದಂತೆ ಮತ್ತೈವರು ವಿದ್ಯಾರ್ಥಿಗಳನ್ನು 2015ರ ಆಗಸ್ಟ್ ತಿಂಗಳಿನಲ್ಲಿ ವಿವಿಯಿಂದ ಅಮಾನತು ಮಾಡಿದ್ದರು. ಇದರಿಂದ ನೊಂದಿದ್ದ ರೋಹಿತ್ ಆತ್ಮಹತ್ಯೆಗೆ ಶರಣಾಗಿದ್ದ. ಈ ಪ್ರಕರಣವೀಗ ರಾಜಕೀಯ ವಲಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


