ದೇಶ

ಮೌನ ಮುರಿದ ಮೆಹಬೂಬಾ ಮುಫ್ತಿ, ಬಿಜೆಪಿ-ಪಿಡಿಪಿ ಮೈತ್ರಿಗೆ ಹೊಸ ಷರತ್ತು

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮತ್ತೆ ಸಮ್ಮಿಶ್ರ ಸರ್ಕಾರ ರಚಿಸಲು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಹೊಸ ಷರತ್ತುಗಳನ್ನು...

ಮೌನ ಮುರಿದ ಮೆಹಬೂಬಾ ಮುಫ್ತಿ, ಬಿಜೆಪಿ-ಪಿಡಿಪಿ ಮೈತ್ರಿಗೆ ಹೊಸ ಷರತ್ತು
ಮೆಹಬೂಬಾ ಮುಫ್ತಿ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮತ್ತೆ  ಸಮ್ಮಿಶ್ರ ಸರ್ಕಾರ ರಚಿಸಲು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಭಾನುವಾರ ಹೊಸ ಷರತ್ತುಗಳನ್ನು ವಿಧಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆ ಸಂಬಂಧ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮೆಹಬೂಬಾ ಮುಫ್ತಿ,  ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಫ್ತಿ ಮೊಹಮ್ಮದ್‌ ಸಯೀದ್‌ ನಡುವೆ ಏರ್ಪಟ್ಟಿರುವ ಮೈತ್ರಿಯ ಉದ್ದೇಶ ಮತ್ತು ಗುರಿಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುತ್ತದೆ ಎಂಬುದು ತಮಗೆ ಮನವರಿಕೆಯಾದ ನಂತರವಷ್ಟೇ ಸರ್ಕಾರ ರಚನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಪಕ್ಷದ ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೆಹಬೂಬಾ ಮುಫ್ತಿ, ನಮ್ಮ ತಂದೆ ಧೈರ್ಯ ಮಾಡಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದರು. ಆದರೆ ಬಿಜೆಪಿ-ಪಿಡಿಪಿ ಮೈತ್ರಿ ನಿರ್ಧಾರ ಜನಪ್ರಿಯವೇನೂ ಅಲ್ಲ. ಆದಾಗ್ಯೂ ಉದ್ದೇಶ ಗಳನ್ನು ಮೈತ್ರಿ ಸರ್ಕಾರ ಜಾರಿಗೆ ತರುವುದಾದರೆ ದೋಸ್ತಿಗೆ ಪಿಡಿಪಿ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಮುಫ್ತಿ ಮೊಹಮ್ಮದ್‌ ಸಯೀದ್‌ ನಂತರ ಜಮ್ಮು- ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಲ್ಲಿದೆ. ತಂದೆ ನಿಧನದ ಶೋಕದಲ್ಲಿರುವ ಮೆಹಬೂಬಾ ಮುಫ್ತಿ ಅವರು ಸರ್ಕಾರ ರಚನೆ ಕುರಿತು ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ತೀರ್ಮಾನದ ಹೊಣೆಯನ್ನು ಪಕ್ಷ ಅವರಿಗೇ ವಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.