ಮೇಘಸ್ಫೋಟ; ಜಲಾವೃತ್ತ ಗ್ರಾಮಗಳಲ್ಲಿ ಮತ್ತೆ 14 ಶವಗಳ ಪತ್ತೆ
ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟ ಪರಿಣಾಮ ಭಾರಿ ಮಳೆ ಮುಂದುವರೆದಿದ್ದು, ಜಲಾವೃತ್ತ ಗ್ರಾಮಗಳಲ್ಲಿ ಮತ್ತೆ 14 ಶವಗಳನ್ನು ಹೊರತೆಗೆಯಲಾಗಿದೆ...

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟ ಪರಿಣಾಮ ಭಾರಿ ಮಳೆ ಮುಂದುವರೆದಿದ್ದು, ಜಲಾವೃತ್ತ ಗ್ರಾಮಗಳಲ್ಲಿ ಮತ್ತೆ 14 ಶವಗಳನ್ನು ಹೊರತೆಗೆಯಲಾಗಿದೆ.
ಛಮೋಲಿ ಮತ್ತು ಪಿಥೋರ್ ಘಡ್ ನಲ್ಲಿನ 6 ಗ್ರಾಮಗಳು ಸಂಪೂರ್ಣ ಜಲಾವೃತ್ತವಾಗಿದ್ದು, ಮಣ್ಣಿನಲ್ಲಿ ಹೂತು ಹೋಗಿದ್ದ 14 ಶವಗಳನ್ನು ಶುಕ್ರವಾರ ಹೊರತೆಗೆಯಲಾಗಿದ್ದು, ಆ ಮೂಲಕ ಸಾವಿನ ಸಂಖ್ಯೆ ಸಾವಿನ ಸಂಖ್ಯೆ 39ಕ್ಕೇರಿದೆ.
ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಹಲವು ತಂಡಗಳಾಗಿ ಬೇರ್ಪಟ್ಟಿರುವ ಎನ್ ಡಿಆರ್ ಎಫ್ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನು ಪಿಥೋರ್ ಘಡದಲ್ಲಿ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಸುಮಾರು 60 ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಇದಲ್ಲದೆ 200ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ ಎಂದು ಸ್ಥಳೀಯ ಜಿಲ್ಲಾಡಳಿತ ಮಾಹಿತಿ ನೀಡಿದೆ.
ನಿನ್ನೆ 24 ಗಂಟೆಗಳ ಅವಧಿಯಲ್ಲಿ 50 ಮಿ,ಮೀ ಮಳೆ ದಾಖಲಾಗಿದ್ದ ಛಮೋಲಿಯಲ್ಲಿ ಮೇಘಸ್ಫೋಟದ ಪರಿಣಾಮ ಕೇವಲ 2 ಗಂಟೆಗಳಲ್ಲಿ ಬರೋಬ್ಬರಿ 100 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಎಲ್ಲ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಎಲ್ಲ ಜಲಾಶಗಳು ಭರ್ತಿಯಾಗಿವೆ. ಹೀಗಾಗಿ ಉತ್ತರಾಖಂಡ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಹೆಚ್ಚುವರಿ ನೀರನ್ನು ಹೊರಹಾಕಲಾಗುತ್ತಿದೆ. ಹೀಗಾಗಿ ನದಿ ತಡದ ಗ್ರಾಮಗಳು ಪ್ರವಾಹದಲ್ಲಿ ಮುಳುಗುವ ಭೀತಿ ಎದುರಾಗಿದೆ.
ಇನ್ನು ಪ್ರಮುಖವಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಮೊಬೈಲ್ ಟವರ್ ಗಳು ಕೂಡ ಕುಸಿದಿದ್ದು, ಪ್ರವಾಹ ಸಂತ್ರಸ್ಥರು ಮತ್ತು ಹೊರ ಜಗತ್ತಿನ ಸಂಪರ್ಕ ಕಡಿತವಾಗಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


