ಸೋನಿಯಾ ಕ್ಷೇತ್ರ ರಾಯ್ ಬರೇಲಿ ಮೇಲಿ ಕಣ್ಣಿಟ್ಟಿರುವ ಮೋದಿ ಸರ್ಕಾರ
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಎನ್ ಡಿಎ ಮತ್ತು ಯುಪಿಎ ಮೈತ್ರಿಕೂಟಗಳಿಗೆ...

Published On :
ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಎನ್ ಡಿಎ ಮತ್ತು ಯುಪಿಎ ಮೈತ್ರಿಕೂಟಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ನ್ನು ಸೋಲಿಸಿ ಯುಪಿಎಗೆ ಅವಮಾನ ಮಾಡಬೇಕೆಂದು ಹೊರಟಿರುವ ಕೇಂದ್ರ ಸರ್ಕಾರ ಯುಪಿಎ-1 ಸರ್ಕಾರದ ಆಡಳಿತಾವಧಿಯಲ್ಲಿ ಆರಂಭಿಸಿ ಬಾಕಿ ಉಳಿದಿರುವ ದೀರ್ಘಕಾಲದ ಯೋಜನೆಗಳಿಗೆ ಚಾಲನೆ ನೀಡಲು ಮುಂದಾಗಿದೆ. ಸೋನಿಯಾ ಗಾಂಧಿಯವರ ಕ್ಷೇತ್ರ ರಾಯ್ ಬರೇಲಿಯಲ್ಲಿ ಅಖಿತ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ಇರುವ ಎಲ್ಲಾ ಅಡ್ಡಿ ಆತಂಕಗಳನ್ನು ಬಗೆಹರಿಸಿದ್ದಾರೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ. ಕಾಮಗಾರಿ ಮುಂದಿನ ಒಂದೆರಡು ತಿಂಗಳಲ್ಲಿ ಆರಂಭವಾಗಲಿದೆ.
ಸಂಸ್ಥೆಯ ಕಟ್ಟಡ ನಿರ್ಮಾಣ ಯೋಜನೆಗೆ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ 2007ರಲ್ಲಿಯೇ ಹಸಿರು ನಿಶಾನೆ ತೋರಲಾಗಿತ್ತು. ಆದರೆ ಅಲ್ಲಿಂದ ಕಾಮಗಾರಿ ಶುರುವಾಗಿರಲಿಲ್ಲ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದ ಸೋನಿಯಾ ಗಾಂಧಿ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಕೇಳಿಕೊಂಡಿದ್ದರು.
ಈ ಯೋಜನೆ 2018ಕ್ಕೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆರಂಭದಲ್ಲಿ ಉತ್ತರ ಪ್ರದೇಶದ ಬಿಎಸ್ ಪಿ ಸರ್ಕಾರ ಭೂಮಿ ನೀಡಲು ನಿರಾಕರಿಸಿತ್ತು. ನಂತರ ಬಂದ ಸಮಾಜವಾದಿ ಪಕ್ಷ 2012ರಲ್ಲಿ ಭೂಮಿ ಮಂಜೂರು ಮಾಡಿತ್ತು.
ಪ್ರಧಾನ ಮಂತ್ರಿ ಸ್ವಾಸ್ಥ್ಯ ಸೇವಾ ಯೋಜನೆಯ ಎರಡನೇ ಹಂತದಲ್ಲಿ ರಾಯ್ ಬರೇಲಿಯಲ್ಲಿ ಅಖಿತ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೇಂದ್ರ ಸರ್ಕಾರ ಮೊದಲ ಭಾಗವಾಗಿ 820 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. 148.15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರ ದೇಶಾದ್ಯಂತ 19 ಏಮ್ಸ್ ವಿದ್ಯಾಲಯ ಸ್ಥಾಪನೆಯನ್ನು ಘೋಷಿಸಿದ್ದು, ಮೊದಲ ಹಂತದಲ್ಲಿ ಭೋಪಾಲ್, ಭುವನೇಶ್ವರ, ಜೋಧಪುರ್, ಪಾಟ್ನಾ, ರಾಯ್ ಪುರ ಮತ್ತು ರಿಷಿಕೇಶಗಳಲ್ಲಿ ಸ್ಥಾಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


