ದೇಶ

'ಪ್ರಮಾಣ ವಚನ ಸಮಾರಂಭಕ್ಕೆ ಸುಷ್ಮಾ ಗೈರು' ಅಂತ ಹೆಡ್​ಲೈನ್ ಬೇಡ!

ಉತ್ತಮ ಹಾಸ್ಯ ಸ್ವಭಾವವನ್ನು ಹೊಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಈ ಬಾರಿ ಮಾಧ್ಯಮಗಳ ಕಾಲೆಳೆದು ತಮಾಷೆ...

'ಪ್ರಮಾಣ ವಚನ ಸಮಾರಂಭಕ್ಕೆ ಸುಷ್ಮಾ ಗೈರು' ಅಂತ ಹೆಡ್​ಲೈನ್ ಬೇಡ!
ಸುಷ್ಮಾ ಸ್ವರಾಜ್
Published On :
ನವದೆಹಲಿ: ಉತ್ತಮ ಹಾಸ್ಯ ಸ್ವಭಾವವನ್ನು ಹೊಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಈ ಬಾರಿ ಮಾಧ್ಯಮಗಳ ಕಾಲೆಳೆದು ತಮಾಷೆ ನೋಡಿದ್ದಾರೆ. 
ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಸಚಿವ ಸಂಪುಟ ಪುನಾರಚನೆ ಮಾಡಿದ್ದು, 19 ಸಂಸದರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ರಾಷ್ಟ್ರಪತಿ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ ಸುಷ್ಮಾ ಸ್ವರಾಜ್ ಅವರು ಭಾಗವಹಿಸಿರಲಿಲ್ಲ. ಅದೇ ಸಮಯದಲ್ಲಿ ಹಂಗೇರಿ ವಿದೇಶಾಂಗ ಸಚಿವರ ಜತೆ ಮಾತುಕತೆ ಈ ಮೊದಲೇ ನಿಗಧಿಯಾಗಿದ್ದರಿಂದ ತಾವು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೆಳಗ್ಗೆ 8.52ರ ಹೊತ್ತಿನಲ್ಲಿ ಟ್ವೀಟ್ ಮಾಡಿದ್ದರು. ಜತೆಗೆ ಮಾಧ್ಯಮಗಳ ಗಮನಕ್ಕೆ ಎಂದು ಹಾಕಿ, ‘ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸುಷ್ಮಾ ಗೈರು’ ಎನ್ನುವ ಶೀರ್ಷಿಕೆ ಕೊಡಬೇಡಿ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಹೊಸದಾಗಿ ಸಂಪುಟ ಸೇರ್ಪಡೆಯಾಗುತ್ತಿರುವ ಎಲ್ಲಾ ಸಂಸದರಿಗೂ ಸುಷ್ಮಾ ಶುಭಾಶಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.