ಜಿಎಸ್ ಟಿ ಮಸೂದೆ ಅಂಗೀಕಾರ ಸರ್ಕಾರದ ಆದ್ಯತೆ: ಹಣಕಾಸು ಇಲಾಖೆ ರಾಜ್ಯ ಸಚಿವ ಗಂಗ್ವಾರ್
ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ನವದೆಹಲಿ: ಜಿಎಸ್ ಟಿ ಮಸೂದೆ ಅಂಗೀಕರಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಲ್ಲಿ ಪ್ರಮುಖವಾದದ್ದು ಎಂದು ಹಣಕಾಸು ಇಲಾಖೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.
ಹಣಕಾಸು ಇಲಾಖೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತೋಷ್ ಗಂಗ್ವಾರ್ ಹಾಗೂ ಅರ್ಜುನ್ ರಾಮ್ ಮೇಘ್ ವಾಲ್, ಪ್ರಸಕ್ತ ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆಯನ್ನು ಅಂಗೀಕಾರ ಮಾಡುವುದು ಸರ್ಕಾರದ ಆದ್ಯತೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸಚಿವರು ಅಧಿಕಾರ ವಹಿಸಿಕೊಂಡ ವೇಳೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸಹ ಉಪಸ್ಥಿತರಿದ್ದರು. ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವುದಕ್ಕೂ ಮುನ್ನ ಸಂತೋಷ್ ಗಂಗ್ವಾರ್ ಜವಳಿ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನು ರಾಜ್ಯ ಖಾತೆಯ ಮತ್ತೋರ್ವ ಸಚಿವ ಅರ್ಜುನ್ ರಾಮ್ ಮೇಘ್ ವಾಲ್ ಮಾಜಿ ಅಧಿಕಾರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


