ಉ.ಪ್ರ ಚುನಾವಣೆ: ರಾಹುಲ್, ಪ್ರಿಯಾಂಕ ಯಾರೇ ಬಂದರೂ ಏನೂ ವ್ಯತ್ಯಾಸವಾಗದು: ಬಿಜೆಪಿ
ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕೆ ಸೋನಿಯಾ, ರಾಹುಲ್, ಅಥವಾ ಪ್ರಿಯಾಂಕ, ಯಾರೇ ಬಂದರೂ, ಏನು ವ್ಯತ್ಯಾಸವಾಗದು ಎಂದು ಬಿಜೆಪಿ...

ನವದೆಹಲಿ: ಉತ್ತರ ಪ್ರದೇಶ ಚುನಾವಣಾ ಪ್ರಚಾರಕ್ಕೆ ಸೋನಿಯಾ, ರಾಹುಲ್, ಅಥವಾ ಪ್ರಿಯಾಂಕ, ಯಾರೇ ಬಂದರೂ, ಏನು ವ್ಯತ್ಯಾಸವಾಗದು ಎಂದು ಬಿಜೆಪಿ ಮುಖಂಡ ದಿನೇಶ್ ಶರ್ಮಾ ಹೇಳಿದ್ದಾರೆ.
ಮುಂದಿನ ಉತ್ತರ ಪ್ರದೇಶ ಚುನಾವಣೆ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಪಾಲ್ಗೋಳ್ಳುತ್ತಾರೆ ಎಂಬ ಮಾಧ್ಯಮಗಳ ವರದಿಗೆ ಪ್ರತಿಕ್ರಿಯಿಸಿರುವ ದಿನೇಶ್ ಶರ್ಮಾ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳುವುದು ಏನೂ ಇಲ್ಲ, ಗಳಿಸುವುದು ಏನೂ ಇಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಬಂದರು,ಏನೂ ಬದಲಾವಣೆ ಸಾಧ್ಯವಾಗಲಿಲ್ಲ, ನಂತರ ರಾಹುಲ್ ಬಂದರು, ಈವಾಗ ಪ್ರಿಯಾಂಕಾ ಗಾಂಧಿ ಎಂಬ ಟ್ರಂಪ್ ಕಾರ್ಡ್ ಬಳಸಲಾಗುತ್ತಿದೆ. ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಹುಮತ ಪಡೆಯುವ ಕನಸು ಕಾಣುತ್ತಿದೆ ಎಂದು ಟೀಕಿಸಿದರು.
ಬಹು ಹಳೇಯ ಪಕ್ಷವಾದ ಕಾಂಗ್ರೆಸ್ ಬಿಟ್ಟು ಹೋಗಿದ್ದ ಹಲವರನ್ನು ವಾಪಸ್ ಕರೆ ತರಲು ಪ್ರಯತ್ನ ನಡೆಸುತ್ತಿದೆ. ಲೋಕಸಭೆ ವಿಧಾನ ಸಭೆ ಚುನಾವಣೆಗಳಲ್ಲಿ ಈಗಾಗಲೇ ಕಾಂಗ್ರೆಸ್ ತನ್ನ ಅಸ್ಥಿತ್ವ ಕಳೆದು ಕೊಂಡಿದ್ದು, ರಾಷ್ಟ್ರೀಯ ಪಕ್ಷ ಎಂಬ ಹಣೆ ಪಟ್ಟಿ ಸ್ಥಳೀಯ ಪಕ್ಷವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


