ದೇಶ

ಎಎಪಿ ಸರ್ಕಾರದಿಂದ ಕೇಂದ್ರದ ವಿರುದ್ಧ ಫುಲ್ ಪೇಜ್ ಜಾಹೀರಾತು

ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷದ ಸರ್ಕಾರ ಗುರುವಾರ ನರೇಂದ್ರ ಮೋದಿ ಸರ್ಕಾರದ...

ಎಎಪಿ ಸರ್ಕಾರದಿಂದ ಕೇಂದ್ರದ ವಿರುದ್ಧ ಫುಲ್ ಪೇಜ್ ಜಾಹೀರಾತು
ಆಪ್ ಸರ್ಕಾರದ ಜಾಹೀರಾತು
Published On :
ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷದ ಸರ್ಕಾರ ಗುರುವಾರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಫುಲ್ ಪೇಜ್ ಜಾಹೀರಾತು ನೀಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಆಮ್ ಆದ್ಮಿ ಸರ್ಕಾರ ಜಾಹೀರಾತಿನಲ್ಲಿ ಆರೋಪಿಸಿದೆ.
ದೆಹಲಿಯ ಚುನಾಯಿತ ಸರ್ಕಾರದೊಂದಿಗೆ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ದೆಹಲಿ ಹೊರಗಡೆ ಇರುವ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಇದ್ದಕ್ಕಿದಂತೆ ವರ್ಗಾವಣೆ ಮಾಡುತ್ತಿದೆ ಎಂದು ಆಪ್ ಸರ್ಕಾರ ಆರೋಪಿಸಿದೆ.
ದೆಹಲಿ ಜನತೆ ಏಕೆ ನೋವು ಅನುಭವಿಸಬೇಕು ಎಂಬ ಶೀರ್ಷಿಕೆಯಡಿ ದೆಹಲಿ ಸರ್ಕಾರ ಜಾಹೀರಾತು ಪ್ರಕಟಿಸಿದ್ದು, ಜಾಹೀರಾತಿನ ಕೆಳಗಡೆ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ಭಾವಚಿತ್ರವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.