ಪ್ರಚೋದನಕಾರಿ ಭಾಷಣ: ವರುಣ್ ಗಾಂಧಿಗೆ ನೋಟಿಸ್
2009ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ಬಿಜೆಪಿ ಸಂಸದ ವರುಣ್...

Published On :
ಫಿಲಿಭಿತ್: 2009ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವೊಂದು ಬಿಜೆಪಿ ಸಂಸದ ವರುಣ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ವರುಣ್ ಗಾಂಧಿ ಜಿಲ್ಲಾ ನ್ಯಾಯಾಧೀಶ ಕೌಟಿಲ್ಯ ಕುಮಾರ್ ಗೌರ್ ಅವರು ಲೋಕಸಭಾ ಸ್ಪೀಕರ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ.
ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ನಿಗದಿ ಮಾಡಿದ್ದು, ಅಂದು ವಿಚಾರಣೆಗೆ ಹಾಜರಾಗುವಂತೆ ವರುಣ್ ಗಾಂಧಿಗೆ ಸೂಚಿಸಲಾಗಿದೆ.
ವರುಣ್ ಗಾಂಧಿ ಅವರು 2009ರ ಲೋಕಸಭೆ ಚುನಾವಣೆ ವೇಳೆ ಸಾರ್ವಜನಿಕ ಸಭೆಯೊಂದರಲ್ಲಿ ಒಂದು ನಿರ್ಧಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


