ದೇಶ

ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ...

ಮಾನನಷ್ಟ ಮೊಕದ್ದಮೆ ಕೇಸ್ ನಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಜಾಮೀನು
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ನಾಯಕನಿಗೆ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಹರ್ವಿಂದರ್ ಸಿಂಗ್ ಅವರು, 10 ಸಾವಿರ ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.
ಕೋರ್ಟ್ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದೆ.
ಬಿಧುರಿ ವಿರುದ್ಧ ಕ್ರಿಮಿನಲ್ ಕೇಸ್ ಗಳಿದ್ದರೂ ದೆಹಲಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸದ್ದರು. ಈ ಹಿನ್ನಲೆಯಲ್ಲಿ ಬಿಧುರಿ ಅವರು ಕೇಜ್ರಿವಾಲ್ ವಿರುದ್ಧ ಕೇಸ್ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.