ವಿಜಯ್ ಮಲ್ಯಗೆ ವಿಚಾರಣೆಗೆ ಹಾಜರಾಗಲು ದೆಹಲಿ ಕೋರ್ಟ್ ಸೂಚನೆ; ವಿನಾಯ್ತಿ ರದ್ದು
ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನ ಸಮನ್ಸ್ ಗೆ ಖುದ್ದು ಹಾಜರಾಗುವುದನ್ನು ತಪ್ಪಿಸಲು ಮದ್ಯದ ...

Published On :
ನವದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನ ಸಮನ್ಸ್ ಗೆ ಖುದ್ದು ಹಾಜರಾಗುವುದನ್ನು ತಪ್ಪಿಸಲು ಮದ್ಯದ ದೊರೆ ವಿಜಯ್ ಮಲ್ಯಗೆ ನೀಡಲಾಗಿದ್ದ ವಿನಾಯ್ತಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.
ಅಲ್ಲದೆ ಸೆಪ್ಟೆಂಬರ್ 9ರೊಳಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಆದೇಶ ನೀಡಿದ್ದಾರೆ.
ಜಾರಿ ನಿರ್ದೇಶನಾಲಯ ದಾಖಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದನ್ನು ತಪ್ಪಿಸಲು ಮಲ್ಯಗೆ ಡಿಸೆಂಬರ್ 2000ನೇ ಇಸವಿಯಲ್ಲಿ ವಿನಾಯ್ತಿ ನೀಡಲಾಗಿತ್ತು.
1996, 1997 ಮತ್ತು 1998ರಲ್ಲಿ ಲಂಡನ್ ನಲ್ಲಿ ಫಾರ್ಮುಲಾ ಒನ್ ವಿಶ್ವ ಚಾಂಪಿಯನ್ ಷಿಪ್ ಗೆ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಕಿಂಗ್ ಫಿಶರ್ ಚಿಹ್ನೆಯನ್ನು ಪ್ರದರ್ಶಿಸಲು ಬ್ರಿಟನ್ ನ ಕಂಪೆನಿಯೊಂದಕ್ಕೆ 2 ಲಕ್ಷ ಡಾಲರ್ ಹಣವನ್ನು ಅಕ್ರಮವಾಗಿ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ರಿಸರ್ವ್ ಬ್ಯಾಂಕಿನಿಂದ ಅನುಮತಿ ಪಡೆಯದೆ ಹಣ ನೀಡಿರುವುದರಿಂದ ವಿದೇಶಿ ವಿನಿಮಯ ಉಲ್ಲಂಘನೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


