ದೇಶ

ಹಿಜ್ಬುಲ್ ಕಮಾಂಡರ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ; 3 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ಕಮಾ೦ಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯನ್ನು ಪ್ರತಿಭಟಿಸಿ...

ಹಿಜ್ಬುಲ್ ಕಮಾಂಡರ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ; 3 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ
Published On :

ಶ್ರೀನಗರ: ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ಕಮಾ೦ಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯನ್ನು ಪ್ರತಿಭಟಿಸಿ ಕಾಶ್ಮೀರದಲ್ಲಿ ನಿನ್ನೆಯಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿ, ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ಪ್ರತಿಭಟನಾನಿರತರು ಮೂರು ಪೊಲೀಸ್ ಠಾಣೆ ಸೇರಿದಂತೆ 5 ಕಟ್ಟಡಗಳಿಗೆ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ವೆರಿನಾಗ್ ಪ್ರದೇಶದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಹಾರಿಸಿದ ಗುಂಡಿಗೆ ಅಮೀರ್ ಬಷೀರ್ ಎಂಬ 25 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕಳೆದ ರಾತ್ರಿ ಕ್ವೈಮೋಹ್ ಪ್ರದೇಶದಲ್ಲಿ ನಡೆದ ಇಂತಹದ್ದೇ ಘಟನೆಯಲ್ಲಿ ಮತ್ತೊಬ್ಬ ಯುವಕ ಜುಬೇರ್ ಅಹ್ಮದ್ ಬಲಿಯಾಗಿದ್ದಾನೆ. 
ಯೋಧರು ಹಾರಿಸಿದ ಗುಂಡಿಗೆ 16 ವರ್ಷದ ಸಖೀಬ್ ಮನ್ಸೂರ್ ಎಂಬ ಯುವಕ ಸಾವನ್ನಪ್ಪಿದ್ದಾನೆ. ಇದಲ್ಲದೆ ಭದ್ರತಾ ಪಡೆಗಳು ಪ್ರತಿಭಟನಾನಿರತರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದಾಗ ಮತ್ತೊಬ್ಬ ಯುವಕ ಗಣೇಶ್ ಪೊರ ನದಿಯಲ್ಲಿ ಮತ್ತೊಬ್ಬ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಅನಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಇನ್ನು ಪ್ರತಿಭಟನಾನಿರತರ ಮೇಲೆ ಪೊಲೀಸರು ನಡೆಸಿದ ದಾಳಿಯಲ್ಲಿ 30 ಮಂದಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು 20 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಕಾಶ್ಮೀರದ ಹಲವು ಭಾಗಗಳಲ್ಲಿ ಕರ್ಫ್ಯೂವನ್ನು ವಿಧಿಸಲಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. 
ಗಲಭೆಪೀಡಿತ ಪ್ರದೇಶವಾದ ದಕ್ಷಿಣ ಕಾಶ್ಮೀರದಲ್ಲಿ ಮೊಬೈಲ್ ಟೆಲಿಫೋನ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಟ್ಟಣದಲ್ಲಿ ನಡೆದ ಬುರ್ಹಾನ್ ಮುಜಾಫರ್ ವಾನಿಯ ಅಂತ್ಯಸಂಸ್ಕಾರ ಇಂದು ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.