8 ವರ್ಷಗಳ ನಂತರ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪುನಾರಂಭ ಮಾಡಲಿರುವ ಕಾಂಗ್ರೆಸ್?
ವರದಿಗಳ ಪ್ರಕಾರ ಎಲ್ಲವೂ ನಡೆದರೆ 8 ವರ್ಷ ಹಿಂದೆ ಮುಚ್ಚಿ ಹಗೋಗಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಕಾಂಗ್ರೆಸ್ ಮತ್ತೆ ಪ್ರಾರಂಭಿಸಲಿದೆ.

ನವದೆಹಲಿ: ವರದಿಗಳ ಪ್ರಕಾರ ಎಲ್ಲವೂ ನಡೆದರೆ 8 ವರ್ಷ ಹಿಂದೆ ಮುಚ್ಚಿ ಹಗೋಗಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಕಾಂಗ್ರೆಸ್ ಮತ್ತೆ ಪ್ರಾರಂಭಿಸಲಿದೆ.
ನ್ಯಾಷನಲ್ ಹೆರಾಲ್ಡ್ ಹಾಗೂ ಇನ್ನು ಎರಡು ಪತ್ರಿಕೆಗಳನ್ನು ಮತ್ತೆ ಪ್ರಾರಂಭ ಮಾಡುವುದರ ಬಗ್ಗೆ ಕಾಂಗ್ರೆಸ್ ತಿಂಗಳಾಂತ್ಯಕ್ಕೆ ಅಧಿಕೃತ ಘೋಷಣೆ ಮಾಡಲಿದೆ. 8 ವರ್ಷಗಳ ಹಿಂದೆ ಆರ್ಥಿಕ ಮುಗ್ಗಟ್ಟಿನಿಂದಾಗಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಮುಚ್ಚಲಾಗಿತ್ತು.
ಈಗ ಕಾಂಗ್ರೆಸ್ ಪಕ್ಷ ಐತಿಹಾಸಿಕ ಹಿನ್ನೆಲೆಯುಳ್ಳ ಪತ್ರಿಕೆಯನ್ನು ಮತ್ತೆ ಪ್ರಾರಂಭ ಮಾಡುವ ಚಿಂತನೆ ನಡೆಸಿದ್ದು ಮುಂದಿನ ವಾರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು 1938 ರಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರಾರಂಭಿಸಿದ್ದರು, ಆದರೆ 1942 ರ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಿಷೇಧಿಸಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಮತ್ತೆ ಪ್ರಾರಂಭ ಮಾಡುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷದ ಖಜಾಂಚಿ ಮೋತಿಲಾಲ್ ವೋರಾ, ಈ ಬಗ್ಗೆ ಜನವರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಪಾದಕರ ಹೆಸರನ್ನು ಅಂತಿಮಗೊಳಿಸಲಾಗುತ್ತಿದ್ದು, ಮುಂದಿನ ವಾರ ಅಧಿಕೃತ ಘೋಷಣೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


