ಪತಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟ ಪತ್ನಿ
ಪತ್ನಿಯೇ ಗಂಡನನ್ನು ಕೊಂದು ಶವವನ್ನು ಮನೆಯಲ್ಲೇ ಹೂತಿಟ್ಟಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ...

ಭುವನೇಶ್ವರ್: ಪತ್ನಿಯೇ ಗಂಡನನ್ನು ಕೊಂದು ಶವವನ್ನು ಮನೆಯಲ್ಲೇ ಹೂತಿಟ್ಟಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.
ಮೃತ ವ್ಯಕ್ತಿ ಸುಲಾನ್ ಗ್ರಾಮದ 35 ವರ್ಷದ ಶ್ಯಾಂ ಸುಂದರ್ ಅಲಿಯಾಸ್ ಅಶೋಕ್ ಎಂದು ಗುರುತಿಸಲಾಗಿದ್ದು, ಶ್ಯಾಂ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಅಶೋಕ್ ಕೆಲ ದಿನಗಳಿಂದ ಕಾಣಿಸದ ಹಿನ್ನೆಲೆಯಲ್ಲಿ ಅಶೋಕ್ ಸ್ನೇಹಿತರೊಬ್ಬರು ಮಂಚೆಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಮಧ್ಯೆ ಅಶೋಕ್ ಮನೆಯಿಂದ ದುರ್ನಾತ ಬರುತ್ತಿದೆ ಎಂದು ಗ್ರಾಮಸ್ಥರು ದೂರಿದ್ದರಿಂದ ಪೊಲೀಸರು ಮನೆಯ ಬಿಗವನ್ನು ಹೊಡೆದು ಒಳಗೆ ಪ್ರವೇಶಿಸಿದ್ದಾರೆ. ದುರ್ನಾತ ಬರುತ್ತಿದ್ದ ಜಾಗವನ್ನು ಅಗೆದು ನೋಡಿದಾಗ ಅಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಕಣ್ಮರೆಯಾಗಿದ್ದ ಅಶೋಕ್ ಕೊಲೆಯಾಗಿ ಅವನ ಮನೆಯಲ್ಲೇ ಮಣ್ಣಾಗಿದ್ದ.
ಕಳೆದ ಐದು ತಿಂಗಳಿನಿಂದ ಅಶೋಕ್ ಮತ್ತು ದೀಪಾ ಎಂಬುವರು ಈ ಮನೆಯಲ್ಲಿ ವಾಸವಾಗಿದ್ದರು ಎಂದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ದೀಪಾ ವ್ಯಕ್ತಿಯೊರ್ವನೊಂದಿಗೆ ಸಂಬಂಧವಿಟ್ಟುಕೊಂಡಿದ್ದು ಇದೇ ಕಾರಣಕ್ಕೆ ಇವರಿಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು ಎಂದು ಮನೆಯ ಮಾಲೀಕರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯೊಬ್ಬಳೊಂದಿಗೆ ಈ ಕೃತ್ಯ ಎಸಗಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಭಾಗಿಯಾಗಿದ್ದಾನೆ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದು, ತಲೆಮರೆಸಿಕೊಂಡಿರುವ ಅಶೋಕ್ ಪತ್ನಿ ದೀಪಾಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


