ಉದ್ರಿಕ್ತ ಕಾಶ್ಮೀರದಲ್ಲಿ ಮತ್ತೋರ್ವ ಬಲಿ: ಸಾವಿನ ಸಂಖ್ಯೆ 25ಕ್ಕೆ ಏರಿಕೆ
ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಬುರ್ಹಾನ್ ವಾಲಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಹಿಂಸೆಗೆ ಮಂಗಳವಾರ ಮತ್ತೋರ್ವ ವ್ಯಕ್ತಿ...

ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಬುರ್ಹಾನ್ ವಾಲಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಹಿಂಸೆಗೆ ಮಂಗಳವಾರ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುಂಪೊಂದು ಹಿಂಸಾಚಾರ ನಡೆಸುತ್ತಿದ್ದರಿಂದ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ವ್ಯಕ್ತಿ ಹತ್ಯೆಯಾಗಿದ್ದಾನೆಂದು ಮೂಲಗಳು ತಿಳಿಸಿವೆ. ಇದರಂತೆ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಈ ವರೆಗೂ ನಿಯಂತ್ರಣಕ್ಕೆ ಬಂದಿಲ್ಲ. ಕೆಲ ಪ್ರದೇಶಗಳಲ್ಲಿ ಈಗಲೂ ಘರ್ಷಣೆಗಳು ನಡೆಯುತ್ತಿದೆ. ಉದ್ರಿಕ್ತ ಗುಂಪೊಂದು ಭದ್ರತಾ ಸಿಬ್ಬಂದಿಗಳ ವಿಭಾಗಗಳ ಮೇಲೆಯೇ ದಾಳಿ ಮಾಡುತ್ತಿದೆ. ಇಂದೂ ಕೂಡ ಗುಂಪೊಂದು ಭದ್ರತಾ ಸಿಬ್ಬಂದಿಗಳ ವಿಭಾಗಕ್ಕೆ ದಾಳಿ ಮಾಡಿದ್ದು, ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಹಾಗೂ ಮಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


