ಉಗ್ರ ಬುರ್ಹಾನ್ ಹತ್ಯೆ: ಕಾಶ್ಮೀರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ಪ್ರಕರಣ ಹಾಗೂ ಪ್ರತಿಭಟನೆಗಳ ಕುರಿತು ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಫ್ರಿಕಾ ರಾಷ್ಟ್ರಗಳ ಪ್ರವಾಸದಿಂದ ಭಾರತಕ್ಕೆ ಮರಳಿದ್ದು, ಕಾಶ್ಮೀರದಲ್ಲಿ ಉಗ್ರನ ಎನ್ ಕೌಂಟರ್ ಪ್ರಕರಣ ಹಾಗೂ ಪ್ರತಿಭಟನೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಸಚಿವರ ಸಭೆ ನಡೆಸಿದ್ದರು. ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ವಿವೇಚನಾಯುಕ್ತವಾಗಿ ಸೇನಾಪಡೆಯನ್ನು ಬಳಸಿಕೊಂಡು, ಅಮರನಾಥ ಯಾತ್ರಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕೆಂದು ಜು.11 ರಂದು ನಡೆದ ರಾಜನಾಥ್ ಸಿಂಗ್ ನ್ಯೂರ್ತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈಗ ವಿದೇಶ ಪ್ರವಾಸದಿಂದ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ಪರಿಸ್ಥಿತಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ಮುಜಾಫರ್ ವಾನಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರಿಂದ ಪ್ರತಿಭಟನೆ ನಡೆಯುತ್ತಿದ್ದು ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


