ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ
ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...

ನವದೆಹಲಿ: ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನಿರಾಳ ಲಭಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ 2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.
ಈ ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರಂತೆ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿರುವ ದೆಹಲಿ ಹೈ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ತೇಜಿಯವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದು, ಏಪ್ರಿಲ್ 18 ರವರೆಗೂ ತೀರ್ಪು ಕಾಯ್ದಿರಿಸಿದ್ದಾರೆ. ಹೈಕೋರ್ಟ್ ನ ಈ ಆದೇಶದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಿರಾಳ ಸಿಕ್ಕಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


