ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾ ಬಂಧನ
ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾನನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...

ನವದೆಹಲಿ: ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾನನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಈ ಕುರಿತಂತೆ ತೆಲಂಗಾಣ ಗುಪ್ತಚರ ದಳ ಮಾಹಿತಿ ನೀಡಿದ್ದು, ಹೈದರಾಬಾದ್ ಇಸಿಸ್ ಮುಖ್ಯಸ್ಥನಾಗಿದ್ದ ಯಾಸಿರ್ ನಿಅಮಾತುಲ್ಲಾ ಮತ್ತು ಉಗ್ರ ಸಂಘಟನೆಯಿಂದ ಪ್ರೇರಣೆಗೊಂಡು ವಿಧ್ವಂಸಕ ಕೃತ್ಯಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಅತಾಉಲ್ಲಾ ರೆಹ್ಮಾನ್ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ ಬಂಧನಕ್ಕೊಳಪಡಿಸಿದೆ ಎಂದು ಮಾಹಿತಿ ನೀಡಿದೆ. ಅಲ್ಲದೆ, ಶೀಘ್ರದಲ್ಲೇ ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸುವುದಾಗಿ ಹೇಳಿದೆ.
ಇತ್ತೀಚೆಗಷ್ಟೇ ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಐವರು ಶಂಕಿತರನ್ನು ಎನ್ಐಎ ಅಧಿಕಾರಿಗಳು ಹೈದರಾಬಾದ್ ನಲ್ಲಿ ಬಂಧನಕ್ಕೊಳಪಡಿಸಿದ್ದರು. ಇದರಂತೆ ಉಗ್ರರ ಪಿತೂರಿ ಹಾಗೂ ಯೋಜನೆಗಳನ್ನು ಬೆನ್ನಟ್ಟಿದ್ದ ಎನ್ಐಎ ಅಧಿಕಾರಿಗಳು ಇಂದು ಹೈದರಾಬಾದ್ ಇಸಿಸ್ ಮುಖ್ಯಸ್ಥ ಯಾಸಿರ್ ನಿಅಮಾತುಲ್ಲಾ ಹಾಗೂ ಅತಾಉಲ್ಲಾ ರೆಹ್ಮಾನ್ ರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


