ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಿರ್ಮಲ್ ಕಠಾರಿ ರಾಜೀನಾಮೆ
ಯುಪಿಸಿಸಿ ಅಧ್ಯಕ್ಷ ನಿರ್ಮಲ್ ಕಠಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ.

ನವದೆಹಲಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗಳಾಗುವ ಸೂಚನೆಗಳು ಕಂಡುಬಂದಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ(ಯುಪಿಸಿಸಿ) ಅಧ್ಯಕ್ಷ ನಿರ್ಮಲ್ ಕಠಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಅವರನ್ನು ಉತ್ತರ ಪ್ರದೇಶ ಉಸ್ತುವಾರಿಯನ್ನಾಗಿ ನೇಮಕ ಮಾಡಿದ ನಂತರ ಉತ್ತರ ಪ್ರದೇಶ ಕಾಂಗ್ರೆಸ್ ನಲ್ಲಿ ಕೆಲವು ಬದಲಾವಣೆಗಳಾಗುವ ನಿರೀಕ್ಷೆಗಳಿದ್ದವು. ಟಿವಿ ಮಾಧ್ಯಮಗಳ ವರದಿಯ ಪ್ರಕಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಮಲ್ ಕಠಾರಿ ರಾಜೀನಾಮೆ ಪಾತ್ರವನ್ನು ಅಂಗೀಕರಿಸಿದ್ದಾರೆ.
ಫೈಜಾಬಾದ್ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಿರ್ಮಲ್ ಕಠಾರಿಯಾ ಅವರನ್ನು ಅಕ್ಟೊಬರ್ 2012 ರಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ 2012 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಠಾರಿ ವಿಫಲವಾಗಿದ್ದರು. ನಿರ್ಮಲ್ ಕಠಾರಿ ರಾಜೀನಾಮೆ ನೀಡಿರುವ ಬೆನ್ನಲ್ಲೇ ಗುಲಾಮ್ ನಬಿ ಆಜಾದ್ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


