ಗ್ಯಾಂಗ್ ರೇಪ್ ಮಾಡಿ ವಿಡಿಯೋ ಅಪ್‌ಲೋಡ್: 2 ಬಂಧನ
ಹದಿಹರೆಯದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಘಟನೆ ಉತ್ತರ ಪ್ರದೇಶದ ಬನ್ಸ್'ದೀಹ್...

ಬಲ್ಲಿಯಾ: ಹದಿಹರೆಯದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವ ಘಟನೆ ಉತ್ತರ ಪ್ರದೇಶದ ಬನ್ಸ್'ದೀಹ್ ಪ್ರದೇಶದಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ನೌಷಾದ್ ಮತ್ತು ವಿರೇಂದರ್ ಭಾರ್ತಿ ಬಂಧಿತ ಆರೋಪಿಗಳಾಗಿದ್ದಾರೆ. ಯುವತಿಯನ್ನು ಮೇಲೆ ಅತ್ಯಾಚಾರವೆಸಗಿ ನಂತರ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದರು ಎಂದು ಸುಪರಿಂಟೆಂಡೆಂಟ್ ಪೊಲೀಸ್ ಮನೋಜ್ ಕುಮಾರ್ ಝಾ ಅವರು ಹೇಳಿದ್ದಾರೆ.
ಬಂಧಿತ ಆರೋಪಿಗಳು ಮಾರ್ಚ್ 4 ರಂದು ಬನ್ಸದೀಹ್ ಎಂಬ ಪ್ರದೇಶದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದರು. ನಂತರ ಇದರ ವಿಡಿಯೋವನ್ನು ಮಾಡಿಕೊಂಡಿದ್ದ ಇವರು ಹುಡುಗಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾರೆ.
ಹೇಳಿದಂತೆ ಕೇಳಿ ಇತರರೊಂದಿಗೂ ಸೆಕ್ಸ್ ಮಾಡುವಂತೆ ಹೇಳಿದ್ದಾರೆ. ಮಾತನ್ನು ಕೇಳದಿದ್ದರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ. ಹುಡುಗಿ ಇದಕ್ಕೆ ಒಪ್ಪದಿದ್ದ ಕಾರಣ ವಿಡಿಯೋವನ್ನು ಸಾಮಾಜಿಕ ಜಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆಂದು ತಿಳಿದುಬಂದಿದೆ.
ಪ್ರಸ್ತುತ ಪೊಲೀಸರು ತನಿಖೆ ನಡೆಸುತ್ತಿದ್ದು, ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


