ದೇಶ

ಗೋಮಾಂಸ ಬಳಕೆ ಬಗ್ಗೆ ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದೆ ದೆಹಲಿ ಹೈಕೋರ್ಟ್

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗೋಮಾಂಸ ಖರೀದಿ, ಬಳಕೆಯನ್ನು ಅಪರಾಧಿಕಾರಣಗೊಳಿಸಿರುವುದನ್ನು ಪ್ರಶ್ನಿಸಿ ಪಿಐಎಲ್ ದಾಖಲಾಗಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಗೋಮಾಂಸ ಬಳಕೆ ಬಗ್ಗೆ ದೆಹಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದೆ ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್
Published On :

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗೋಮಾಂಸ ಖರೀದಿ, ಬಳಕೆಯನ್ನು ಅಪರಾಧಿಕಾರಣಗೊಳಿಸಿರುವುದನ್ನು ಪ್ರಶ್ನಿಸಿ ಪಿಐಎಲ್ ದಾಖಲಾಗಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ದೆಹಲಿಯಲ್ಲಿ ಗೋಮಾಂಸ ಖರೀದಿಸುವುದು ಹಾಗೂ ಬಳಕೆ ಮಾಡುವುದರ ಬಗ್ಗೆ ದೆಹಲಿ ಕೋರ್ಟ್ ನ ನ್ಯಾ. ಜಿ ರೋಹಿಣಿ, ನ್ಯಾ. ಸಂಗೀತ ಸೆಹಗಲ್ ಅವರ ವಿಭಾಗೀಯ ಪೀಠ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದು, ಸೆ.14 ರೊಳಗೆ ಉತ್ತರಿಸಬೇಕು ಎಂದು ಸೂಚನೆ ನೀಡಿದೆ. ದೆಹಲಿಯ ಕೃಷಿ ಜಾನುವಾರು ರಕ್ಷಣಾ ಕಾಯ್ದೆ ಪ್ರಕಾರ ಗೋಮಾಂಸ ಇಟ್ಟುಕೊಳ್ಳುವುದು ಹಾಗೂ ಸೇವನೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದೆ. ಈ ಕಾಯ್ದೆಯಲ್ಲಿನ ಕೆಲವು ಅಂಶಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಎಸ್ ಸಿ/ಎಸ್ ಟಿ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಎನ್ ಜಿ ಒ ಹೈಕೋರ್ಟ್ ಮೆಟ್ಟಿಲೇರಿದ್ದು, ಕಾಯ್ದೆಯ ಅಂಶಗಳು ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ವಾದಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.