ದೇಶ

ಮಲಗಿದ್ದ ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ ದುಷ್ಕರ್ಮಿಗಳು

ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ಮಾಡಿರುವ ಘಟನೆಯೊಂದು ಕೃಷ್ಣಗಿರಿಯಲ್ಲಿ ತಡರಾತ್ರಿ ನಡೆದಿದೆ...

ಮಲಗಿದ್ದ ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
Published On :

ಕೃಷ್ಣಗಿರಿ: ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ಮಾಡಿರುವ ಘಟನೆಯೊಂದು ಕೃಷ್ಣಗಿರಿಯಲ್ಲಿ ತಡರಾತ್ರಿ ನಡೆದಿದೆ.

ಭುವನೇಶ್ವರಿ (20) ಆ್ಯಸಿಡ್ ದಾಳಿಗೆ ಒಳಗಾದ ಯುವತಿಯಾಗಿದ್ದಾಳೆ. ಗುರುಬರಪಲ್ಲಿಯ ಕುಪ್ಪುಚಿಪಾರೈನಲ್ಲಿರುವ ತನ್ನ ಮನೆಯ ಕೊಠಡಿಯೊಂದರಲ್ಲಿ ಯುವತಿ ಮಲಗಿದ್ದಳು. ಕಿಟಕಿ ಪಕ್ಕದಲ್ಲಿ ಯುವತಿ ಮಲಗಿದ್ದಳು. ಈ ವೇಳೆ ದುಷ್ಕರ್ಮಿಗಳು ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾರೆ. ಅದೃಷ್ಟವಶಾತ್ ಯುವತಿ ತನ್ನ ಮುಖವನ್ನು ಬೆಡ್ ಶೀಟ್ ನಿಂದ ಮುಚ್ಚಿಕೊಂಡಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾಳೆ.

ಪ್ರಸ್ತುತ ಯುವತಿ ದೇಹದ ಮೇಲೆ ಕೆಲ ಸಣ್ಣಪುಟ್ಟ ಗಾಯಗಳಾಗಿದ್ದು, ಕೃಷ್ಣಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭುವನೇಶ್ವರಿ ಕೃಷ್ಣಗಿರಿ ಸರ್ಕಾರಿ ಕಲೆ ಮತ್ತು ವಿಜ್ಞಾನ ಮಹಿಳೆಯರ ಕಾಲೇಜಿನಲ್ಲಿ ಜೀವರಸಾಯನ ಶಾಸ್ತ್ರ (ಬಯೋಕೆಮಿಸ್ಟ್ರಿ)ಯಲ್ಲಿ ಬಿ.ಎಸ್ ಸಿ ಪದವಿ ಪೂರ್ಣಗೊಳಿಸಿದ್ದು, ಇದೇ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮಾಡಲು ಇಚ್ಛಿಸಿದ್ದಳು. ದಾಳಿಯಾದ ದಿನದಂದು ಕಾಲೇಜಿನಲ್ಲಿ ಕೌನ್ಸಿಲಿಂಗ್ ಗೆ ಹೋಗಿ ಬಂದಿದ್ದಳು.

ಪ್ರಕರಣ ಸಂಬಂಧ ಈ ವರೆಗೂ ಯಾವುದೇ ರೀತಿಯ ದೂರುಗಳು ದಾಖಲಾಗಿಲ್ಲ. ಆದರೆ, ಗುರುಬರಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.