ದೇಶ

ಕಾಶ್ಮೀರ ಹಿಂಸಾಚಾರ: ಸಾವಿಗೀಡಾದವರ ಸಂಖ್ಯೆ 34ಕ್ಕೇರಿಕೆ, 1500ಕ್ಕೂ ಅಧಿಕ ಮಂದಿಗೆ ಗಾಯ

ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬೆನ್ನಲ್ಲೇ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಸದ್ಯ...

ಕಾಶ್ಮೀರ ಹಿಂಸಾಚಾರ: ಸಾವಿಗೀಡಾದವರ ಸಂಖ್ಯೆ 34ಕ್ಕೇರಿಕೆ, 1500ಕ್ಕೂ ಅಧಿಕ ಮಂದಿಗೆ ಗಾಯ
ಶ್ರೀನಗರದಲ್ಲಿ ಪ್ರತಿಭಟನೆ(ಸಂಗ್ರಹ ಚಿತ್ರ)
Published On :
ಶ್ರೀನಗರ: ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬೆನ್ನಲ್ಲೇ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಸದ್ಯ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಂಸಾಚಾರದಲ್ಲಿ  ಮೃತಪಟ್ಟವರ ಸಂಖ್ಯೆ 34ಕ್ಕೇರಿದ್ದು, 1,500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದು 2010ರಿಂದ ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಅತ್ಯಂತ ಘೋರವಾದದ್ದು ಎಂದು ಹೇಳಲಾಗುತ್ತಿದೆ.
ರಾಜಧಾನಿ ಶ್ರೀನಗರ, ಅನಂತ್ ನಾಗ್, ಗಡಿ ಜಿಲ್ಲೆ ಪುಲ್ವಾಮದಲ್ಲಿಯೂ ಪೊಲೀಸರು ಮತ್ತು ಉದ್ರಿಕ್ತರ ನಡುವಿನ ಸಂಘರ್ಷ ಮುಂದುವರೆದಿದೆ. 300ಕ್ಕೂ ಅಧಿಕ ಸೈನಿಕರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ ಎಂದು  ತಿಳಿದುಬಂದಿದೆ. ಈ ಮಧ್ಯೆ ಪ್ರತಿಭಟನಾಕಾರರ ಪ್ರತಿಭಟನೆ, ದಾಳಿ ಮುಂದುವರಿಯುತ್ತಿದ್ದರೂ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಿಲ್ಲಿಸದೆ ಮುಂದುವರಿಸುವುದಾಗಿ ಭಾರತ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.