ಬುಹ್ರಾನ್ ವಾನಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದ ಪಾಕಿಸ್ತಾನ
ಕಾಶ್ಮೀರದಲ್ಲಿ ಹತ್ಯೆಯಾದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಗೆರಿಲ್ಲಾ ಪಡೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿಯೊಬ್ಬ ಸ್ವಾತಂತ್ರ್ಯ ಹೋರಾಟನೆಂದು...

ಇಸ್ಲಾಮಾಬಾದ್: ಕಾಶ್ಮೀರದಲ್ಲಿ ಹತ್ಯೆಯಾದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಗೆರಿಲ್ಲಾ ಪಡೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿಯೊಬ್ಬ ಸ್ವಾತಂತ್ರ್ಯ ಹೋರಾಟನೆಂದು ಪಾಕಿಸ್ತಾನ ಗುರುವಾರ ಹೇಳಿದೆ.
ಕಾಶ್ಮೀರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ನಫೀಸ್ ಜಕಾರಿಯಾ ಅವರು, ಬುರ್ಹಾನ್ ಮುಜಾಫರ್ ವಾನಿಯೊಬ್ಬ ಸ್ವಾತಂತ್ರ್ಯ ಹೋರಾಟಗಾನಾಗಿದ್ದು, ಕಾಶ್ಮೀರದಲ್ಲಿ ಭಾರತೀಯ ಸೇನೆಗಳು ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರದಲ್ಲಿ ಭಾರತೀಯ ಸೇನೆ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ರಾಜ್ಯದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ಪಾಕಿಸ್ತಾನ ಅಂತರಾಷ್ಟ್ರೀಯ ಸಮುದಾಯದ ಗಮನಕ್ಕೆ ತಂದಿದೆ. ಕಾಶ್ಮೀರ ವಿವಾದ ಇದೀಗ ಅಂತರಾಷ್ಟ್ರೀಯ ಸಮಸ್ಯೆಯಾಗಿದ್ದು, ಸಮಸ್ಯೆಯನ್ನು ಬಗೆಹರಿಸುವುದು ವಿಶ್ವಸಂಸ್ಥೆಯ ಕೆಲಸವಾಗಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಲು ಪಾಕಿಸ್ತಾನ ಸಿದ್ಧವಿದೆ. ಈ ಕುರಿತಂತೆ ಮಾತುಕತೆಗೆ ನಾವು ಸಿದ್ಧರಿದ್ದೇವೆ. ಯಾವುದೇ ವಿಚಾರಕ್ಕೂ ಯುದ್ಧವೇ ಪರಿಹಾರವಾಗಿರುವುದಿಲ್ಲ. ಕಾಶ್ಮೀರ ವಿಚಾರದಲ್ಲಿ ಈ ಹಿಂದೆ ಕೂಡ ನಾವು ಯುದ್ಧ ಮಾಡಿದ್ದೇವೆ. ಮಾತುಕತೆ ನಡೆಸಿದ್ದೇವೆ. ಆದರೆ, ಆದಾವುದರಿಂದಲೂ ಯಾವುದೇ ಪ್ರಯೋಜನಗಳಾಗಿಲ್ಲ. ಕಾಶ್ಮೀರ ಸಮಸ್ಯೆ ಕುರಿತಂತೆ ನಮಗೆ ವಿಶ್ವಸಂಸ್ಥೆಯಿಂದಲೇ ಪರಿಹಾರಬೇಕಿದೆ. ಸಮಸ್ಯೆ ಕುರಿತಂತೆ ಭಾರತವು ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುವಂತೆ ಅಂತರಾಷ್ಟ್ರೀಯ ಸಮುದಾಯಗಳು ಭಾರತದ ಮೇಲೆ ಒತ್ತಡ ಹೇರಬೇಕಿದೆ.
ವಿಶ್ವಸಂಸ್ಥೆಯ ನಿಯಮಗಳನ್ನು ಸುಧೀರ್ಘವಾಗಿ ಉಲ್ಲಂಘಿಸುತ್ತಿರುವುದರಿಂದಲೇ ಇಂದಿಗೂ ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ಸ್ಥಾನವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಸಾರ್ಕ್ ಶೃಂಗಸಭೆ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ಇಸ್ಲಾಮಾಬಾದ್ ನಲ್ಲಿ ಮುಂದಿನ ನವೆಂಬರ್ ತಿಂಗಳಿನಲ್ಲಿ ಸಾರ್ಕ್ ಶೃಂಗಸಭೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


