ದೇಶ

ಸ್ಮೃತಿ ಇರಾನಿ ಪದವಿ ವಿವಾದ: ದಾಖಲೆ ಒದಗಿಸುವಂತೆ ಚು.ಆಯೋಗಕ್ಕೆ ನ್ಯಾಯಾಲಯ ಸೂಚನೆ

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪದವಿ ಕುರಿತ ದಾಖಲೆಗಳನ್ನು ನೀಡುವಂತೆ ದೆಹಲಿ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಗುರುವಾರ ಸೂಚನೆ ನೀಡಿದೆ...

ಸ್ಮೃತಿ ಇರಾನಿ ಪದವಿ ವಿವಾದ: ದಾಖಲೆ ಒದಗಿಸುವಂತೆ ಚು.ಆಯೋಗಕ್ಕೆ ನ್ಯಾಯಾಲಯ ಸೂಚನೆ
ಕೇಂದ್ರ ಸಚಿವೆ ಸ್ಮೃತಿ ಇರಾನಿ
Published On :

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪದವಿ ಕುರಿತ ದಾಖಲೆಗಳನ್ನು ನೀಡುವಂತೆ ದೆಹಲಿ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಗುರುವಾರ ಸೂಚನೆ ನೀಡಿದೆ.

2004ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 1996ರಲ್ಲಿ ಬಿ.ಎ. ಪದವಿ ಪಡೆದಿರುವುದಾಗಿ ಇರಾನಿ ಅವರು ಪ್ರಮಾಣ ಪತ್ರ ಸಲ್ಲಿಸಿದ್ದರು. ಆದರೆ, ಇದು ಸುಳ್ಳು ಮಾಹಿತಿಯಾಗಿದೆ ಎಂದು ಅಹ್ಮರ್ ಖಾನ್ ಅವರು ದೂರು ದಾಖಲಿಸಿದ್ದರು. ಇದರಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಕೂಡ ಇರಾನಿ ಸಲ್ಲಿಸಿರುವ ದಾಖಲೆಗಳು ಸುಳ್ಳು ದಾಖಲೆಗಳಾಗಿವೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಹರ್ವಿಂದರ್‌ ಸಿಂಗ್‌ ಅವರು ಸೂಚಿನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.