ಸಂತಾನಹರಣ ಚಿಕಿತ್ಸೆ ನಂತರವೂ ಗರ್ಭಿಣಿಯಾದ ಮಹಿಳೆ: ವೈದ್ಯನಿಗೆ ದಂಡ
ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ಮಹಿಳೆಯೊಬ್ಬರು ಗರ್ಭಿಣಿಯಾದ ಹಿನ್ನೆಲೆಯಲ್ಲಿ ಗ್ರಾಹಕ ನ್ಯಾಯಾಲಯವೊಂದು ವೈದ್ಯನಿಗೆ ದಂಡ ಹಾಕುವ...

ಮುಜಾಫರ್‌ನಗರ: ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ಮಹಿಳೆಯೊಬ್ಬರು ಗರ್ಭಿಣಿಯಾದ ಹಿನ್ನೆಲೆಯಲ್ಲಿ ಗ್ರಾಹಕ ನ್ಯಾಯಾಲಯವೊಂದು ವೈದ್ಯನಿಗೆ ದಂಡ ಹಾಕುವ ಮೂಲಕ ಶಿಕ್ಷೆ ನೀಡಿದೆ.
2013ರಲ್ಲಿ ಮಂಜು ಅಗ್ಗರ್ವಾಲ್ ಎಂಬ ವೈದ್ಯನ ಬಳಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದೆ. ಆದರೆ, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕವೂ ನನಗೆ ಮಗುವಾಗಿದೆ ಎಂದು ಹೇಳಿ ಸುನಿತಾ ದೇವಿ ಎಂಬುವವರು ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಇದರಂತೆ ವಿಚಾರಣೆ ನಡೆಸಿರುವ ನ್ಯಾಯಾಲಯವು ಶಸ್ತ್ರಚಿಕಿತ್ಸೆ ವೇಳೆ ವೈದ್ಯ ತೋರಿದ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ ಎಂದು ಹೇಳಿದ್ದು, ತಿಂಗಳೊಳಗಾಗಿ ಸುನಿತಾ ದೇವಿ ಅವರಿಗೆ ರು.1,12,000 ಹಣವನ್ನು ನೀಡುವಂತೆ ಶಿಕ್ಷೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


