ಕಾಶ್ಮೀರಿ ಯುವಕರ ಮನಸ್ಥಿತಿಯನ್ನು ಪ್ರಧಾನಿ ಅರ್ಥ ಮಾಡಿಕೊಳ್ಳಬೇಕು: ಬಿಜೆಡಿ
ಗಲಭೆ ಪೀಡಿತ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಪಿಡಿಪಿ-ಬಿಜೆಪಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಒಡಿಶಾದ ಆಡಳಿತಾರೂಢ ಪಕ್ಷ ಬಿಜೆಡಿ...

ನವದೆಹಲಿ: ಗಲಭೆ ಪೀಡಿತ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಪಿಡಿಪಿ-ಬಿಜೆಪಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಒಡಿಶಾದ ಆಡಳಿತಾರೂಢ ಪಕ್ಷ ಬಿಜೆಡಿ, ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಿ ಯುವಕರ ಮನಸ್ಸನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕೆಂದು ಅಭಿಪ್ರಾಯಪಟ್ಟಿದೆ.
ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ, ಕಾನೂನು ಸುವ್ಯವಸ್ಥೆಗಿಂತಲೂ ಹೆಚ್ಚಿನದ್ದು, ಪರಿಸ್ಥಿತಿ ನಿಭಾಯಿಸಲು ಕೇಂದ್ರ- ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮ ಸೂಕ್ತವಾಗಿಲ್ಲ. ಕಾಶ್ಮೀರದಲ್ಲಿ ನಡೆಯಬಹುದಾದಂತಹ ಪ್ರತಿಭಟನೆಯನ್ನು ಊಹಿಸಲು ಗುಪ್ತಚರ ಇಲಾಖೆಯೂ ವಿಫಲವಾಗಿದೆ ಎಂದು ಬಿಜೆಡಿ ಸಂಸದ ಭಾರ್ತೃಹರಿ ಹೇಳಿದ್ದಾರೆ. ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಕೇಜ್ ಕಾಶ್ಮೀರಿ ಯುವಕರಿಗೆ ಸಮಾಧಾನಕಾರವಾಗಿಲ್ಲ ಎಂದೆನಿಸುತ್ತದೆ ಈ ಬಗ್ಗೆ ಗಮನ ಹರಿಸಿ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಿ ಯುವಕರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಭಾರ್ತೃಹರಿ ಕರೆ ನೀಡಿದ್ದಾರೆ. ಕಾಶ್ಮೀರದ ವಿಷಯದ ಬಗ್ಗೆ ಸೋಮವಾರ ನಡೆಯಲಿರುವ ಮುಂಗಾರು ಅಧಿವೇಶನದ ಕಲಾಪದಲ್ಲಿ ಚರ್ಚೆ ನಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


