ಉಳಿದ ವಿಷಯಗಳಿಗಿಂತ ರಾಷ್ಟ್ರೀಯ ಹಿತಾಸಕ್ತಿಗೆ ಹೆಚ್ಚು ಆದ್ಯತೆ ನೀಡೋಣ: ಅಧಿವೇಶನದ ಹಿನ್ನೆಲೆ ವಿಪಕ್ಷಗಳಿಗೆ ಪ್ರಧಾನಿ ಕರೆ
ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದಾರೆ.

ನವದೆಹಲಿ: ಜು.18 ರಂದು ಪ್ರಾರಂಭವಾಗಲಿರುವ ಸಂಸತ್ ನ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಸರ್ವಪಕ್ಷ ಸಭೆಯಲ್ಲಿ ಸಂಸತ್ ಅಧಿವೇಶನದ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಇತರ ವಿಷಯಗಳಿಗಿಂತ ರಾಷ್ಟ್ರೀಯ ಹಿತಾಸಕ್ತಿಗೆ ಹೆಚ್ಚು ಆದ್ಯತೆ ನೀಡಲು ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು, ಈ ಬಾರಿಯ ಮುಂಗಾರು ಅಧಿವೇಶನ ಯಶಸ್ವಿಯಾಗಲಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಎಸ್ ಟಿ ಮಸೂದೆ ಅಂಗೀಕಾರದ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಂಗೀಕಾರಗೊಳ್ಳುವ ಮಸೂದೆಗಳ ಕೀರ್ತಿ ಯಾವ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದು ಮುಖ್ಯವಲ್ಲ. ಎಲ್ಲಾ ಪಕ್ಷಗಳು ಜನರನ್ನು ಪ್ರತಿನಿಧಿಸುತ್ತವೆ. ಎಲ್ಲಾ ವಿಷಯಗಳನ್ನು ಬದಿಗಿರಿಸಿ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಕರೆ ನೀಡಿದ್ದಾರೆ.
ಇನ್ನು ಕಾಶ್ಮೀರ ಗಲಭೆ ವಿಷಯದಲ್ಲಿ ಒಗ್ಗಟ್ಟಿನಿಂದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜಕೀಯ ಪಕ್ಷಗಳಿಗೂ ಧನ್ಯವಾದ ತಿಳಿಸಿದ್ದಾರೆ. ಇನ್ನು ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷ, ಜಿಎಸ್ ಟಿ ಮಸೂದೆಯದಲ್ಲಿ ಕೆಲವು ಬದಲಾವಣೆಗಳನ್ನು ತರಲು ಕಾಂಗ್ರೆಸ್ ನ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಪ್ರತಿಕ್ರಿಯೆಯನ್ನು ಎದುರುನೋಡುತ್ತಿದ್ದೇವೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


