ದೇಶ

ಅರುಣಾಚಲ ಪ್ರದೇಶ ಸಿಎಂ ಬದಲಾವಣೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸುತ್ತಿದೆ: ಬಿಜೆಪಿ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ನಬಮ್ ತುಕಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನದಿಂದ ಕೆಳಗಿಳಿಸಿರುವುದು ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ.

ಅರುಣಾಚಲ ಪ್ರದೇಶ ಸಿಎಂ ಬದಲಾವಣೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸುತ್ತಿದೆ: ಬಿಜೆಪಿ
ಬಿಜೆಪಿ
Published On :

ನವದೆಹಲಿ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ನಬಮ್ ತುಕಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನದಿಂದ ಕೆಳಗಿಳಿಸಿರುವುದು ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ರಾಜಕೀಯ ಅಸ್ಥಿರತೆ ಆಧಾರದಲ್ಲಿ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈಗ ಅರುಣಾಚಲಪ್ರದೇಶದಲ್ಲಿ ಸಿಎಂ ಬದಲಾಗಿರುವುದನ್ನೇ ತನ್ನ ನಡೆಯ ಸಮರ್ಥನೆಗೆ ಬಳಸಿಕೊಳ್ಳುತ್ತಿದೆ.

ಕಾಂಗ್ರೆಸ್ ಹೈಕಮಾಂಡ್ ನಬಾಮ್ ತುಕಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಪೆಮಾ ಖಂಡು ಅವರನ್ನು ಅರುಣಾಚಲಪ್ರದೇಶದ ಮುಖ್ಯಮಂತ್ರಿಯನ್ನಾಗಿ ಮಾಡಿದೆ.ನಾವು ನಬಾಮ್ ತುಕಿ ಅವರಿಗೆ ಬಹುಮತ ಇಲ್ಲ ಎಂದು ಹೇಳಿದ್ದು ನಿಜವಾಗಿದೆ ಹಾಗೂ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.

ಈ ಹಿಂದಿನ ಉತ್ತರಾಖಂಡ್ ಸರ್ಕಾರದ ಬಿಕ್ಕಟ್ಟನ್ನು ಉದಾಹರಣೆ ನೀಡಿರುವ ಬಿಜೆಪಿ, ಒಂದೇ ಸಮಸ್ಯೆಗೆ ಸುಪ್ರೀಂ ಕೋರ್ಟ್ ಎರಡು ಪರಿಹಾರಗಳನ್ನು ಸೂಚಿಸದೆ. ಉತ್ತರಾಖಂಡ್ ನಲ್ಲಿ ಹರೀಶ್ ರಾವತ್ ಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದರೆ ಅರುಣಾಚಲ ಪ್ರದೇಶದಲ್ಲಿ ಸರ್ಕಾರವನ್ನು ಮರುಸ್ಥಾಪಿಸಲು ಸೂಚನೆ ನೀಡಿದೆ. ಒಂದು ವೇಳೆ ನಬಾಮ್ ತುಕಿ ಅವರಿಗೆ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದಿದ್ದರೆ ಫಲಿತಾಂಶ ಬೇರೆಯದ್ದೇ ಆಗಿರುತ್ತಿತ್ತು, ಆದ್ದರಿಂದಲೇ ಬಿಜೆಪಿ ಈ ತೀರ್ಪನ್ನು ವಿಚಿತ್ರವಾದ ತೀರ್ಪು ಎಂದು ಹೇಳಿದೆ ಎಂದು ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.